Friday, 22nd November 2024

ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯ: ಮಧ್ಯರಾತ್ರಿವರೆಗೆ ಮೆಟ್ರೋ ಸಂಚಾರ ವಿಸ್ತರಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್‌ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ ವಿಸ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿರ್ಧರಿಸಿದೆ.

ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್‌ ಬೋರ್ಡ್‌ನಿಂದ ಜೂ.20 ರ ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡ ಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಕೊನೆಯ ರೈಲು ಹೊರಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದ್ದು, ನೂಕು ನುಗ್ಗಲು ತಪ್ಪಿಸಲು ಮುಂಚಿ ತವಾಗಿಯೇ ಪೇಪರ್‌ ಟಿಕೆಟ್‌ಗಳನ್ನು ನೀಡಲಾಗುತ್ತಿದೆ. ಜೂ.19ರ ಮಧ್ಯಾಹ್ನ 3 ಗಂಟೆ ಯಿಂದಲೇ ಪೇಪರ್‌ ಟಿಕೆಟ್‌ಗಳು ಎಲ್ಲಾ ಮೆಟ್ರೊ ನಿಲ್ದಾಣ ಗಳಲ್ಲಿ ಲಭ್ಯವಾಗಲಿವೆ.

50 ರೂ. ದರದ ಪೇಪರ್‌ ಟಿಕೆಟ್‌ ಪಡೆದವರು ಕಬ್ಬನ್‌ಪಾರ್ಕ್ ಮೆಟ್ರೊ ರೈಲು ನಿಲ್ದಾಣ ದಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 10 ಗಂಟೆ ನಂತರ ಪ್ರಯಾಣಿಸಬಹುದು.

‘ಪಂದ್ಯಾವಳಿ ನೋಡಲು ಬರುವಾಗ ಎಂದಿನಂತೆ ಸ್ಮಾರ್ಟ್‌ಕಾರ್ಡ್‌ ಮತ್ತು ಟೋಕನ್‌ಗಳನ್ನು ಪಡೆದು ಪ್ರಯಾಣಿಸಬೇಕು. ವಾಪಸ್‌ ಹೋಗಲು ಪೇಪರ್‌ ಟಿಕೆಟ್‌ಗಳನ್ನು ಮಾತ್ರ ಬಳಸಲು ಅವಕಾಶ ಇದೆ’ ಎಂದು ತಿಳಿಸಿದೆ.