Sunday, 10th November 2024

ಇಂದು ಕೊನೆಯ ಟಿ-20 ಪಂದ್ಯ: ಗೆಲುವು ಯಾರಿಗೆ ?

ಅಹಮದಾಬಾದ್: ಟಿ-20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶನಿವಾರ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು 2-2 ಸಮಬಲ ಸಾಧಿಸಿವೆ.

ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದ್ದು, ಇಶಾನ್ ಕಿಶನ್ ಮತ್ತು ಸೂರ್ಯ ಕುಮಾರ್ ಯಾದವ್ ಆಡಿರುವ ಮೊದಲ ಪಂದ್ಯದಲ್ಲೇ ಮಿಂಚುವುದರೊಂದಿಗೆ ಭಾರತದ ಬ್ಯಾಟಿಂಗ್‌ಗೆ ಶಕ್ತಿ ತುಂಬಿದ್ದಾರೆ. ಕಿಶನ್ ಮತ್ತು ಸೂರ್ಯಕುಮಾರ್ ಆಡಿರುವ ತಮ್ಮ ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದಾರೆ. ಹರ್ಯಾಣದ ಆಲ್‌ರೌಂಡರ್ ರಾಹುಲ್ ತೆವಾಟಿಯಾ ಅವರಿಗೆ ಅವಕಾಶ ದೊರೆಯಬಹುದು. ಭಾರತದ ಪಾಲಿಗೆ ಶುಭ ಸಮಾಚಾರವೇನಂದರೆ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಮಿಂಚಿದ್ದಾರೆ.

ಯಜುವೇಂದ್ರ ಚಹಾಲ್ ಬದಲಿಗೆ ಆಡಿದ ರಾಹುಲ್ ಚಹಾರ್ ಉತ್ತಮವಾಗಿ ಆಡಿದ್ದರು. ಕೊಹ್ಲಿ ನೇತೃತ್ವದ ಭಾರತ ತಂಡ ನಾಲ್ಕನೇ ಪಂದ್ಯದಲ್ಲಿ ಗೆಲ್ಲುವುದರೊಂದಿಗೆ ಸರಣಿಯಲ್ಲಿ ಮೊದಲ ಬಾರಿ ಬ್ಯಾಟಿಂಗ್ ಮಾಡಿದ ತಂಡವು ಪಂದ್ಯದಲ್ಲಿ ಗೆಲುವು ಸಾಧಿಸಿದಂತಾಗಿದೆ. ಇಂಗ್ಲೆಂಡ್ ತಂಡ ಜೋಸ್ ಬಟ್ಲರ್ ಮತ್ತು ವಿಶ್ವದ ನಂಬರ್ ಒನ್ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ಬ್ಯಾಟ್‌ನೊಂದಿಗೆ ಹೆಚ್ಚು ಸ್ಥಿರತೆ ತೋರಿಸುತ್ತಾರೆಂದು ನಿರೀಕ್ಷಿಸುತ್ತಿದೆ.

ತಂಡಗಳು: 

ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ ),ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ನವದೀಪ್ ಸೈನಿ, ದೀಪಕ್ ಚಹರ್, ರಾಹುಲ್ ತೇವಾಟಿಯಾ, ಇಶಾನ್ ಕಿಶನ್.

ಇಂಗ್ಲೆಂಡ್: ಇಯಾನ್ ಮೋರ್ಗನ್ (ನಾಯಕ), ಜಾಸ್ ಬಟ್ಲರ್, ಜೇಸನ್ ರಾಯ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮೊಯೀನ್ ಅಲಿ, ಆದಿಲ್ ರಶೀದ್, ರೀಸ್ ಟಾಪ್ಲೆ, ಕ್ರಿಸ್ ಜೋರ್ಡಾನ್, ಮಾರ್ಕ್ ವುಡ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಸ್ಯಾಮ್ ಬಿಲ್ಲಿಂಗ್ಸ್, ಜಾನಿ ಬೈರ್‌ಸ್ಟೋವ್, ಜೋಫ್ರಾ ಆರ್ಚರ್.