Thursday, 12th December 2024

ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು

ಅಹಮದಾಬಾದ್‌: ಭಾರತ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಉಭಯ ತಂಡಗಳು ತಲಾ ಒಂದು ಗೆಲುವು ಸಾಧಿಸಿವೆ.

ಲಕ್ನೋದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬ್ಯಾಟರ್ ಗಳು ಪ್ರತಿ ರನ್ ಗಳಿಸಲೂ ಕೂಡ ಕಷ್ಟಪಟ್ಟಿದ್ದರು. ನಾಯಕ ಹಾರ್ದಿಕ್ ಪಾಂಡ್ಯ ಪಿಚ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ದ್ದರು.

ರಾಂಚಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೂಡ ಪಿಚ್ ಬ್ಯಾಟಿಂಗ್ ಮಾಡಲು ಕಠಿಣವಾಗಿತ್ತು ಎಂದು ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡ 170-175 ರನ್ ಗಳಿಸಿದರೆ ಸವಾಲಿನ ಮೊತ್ತವಾಗಲಿದೆ ಎಂದು ಕ್ಯುರೇಟರ್ ಹೇಳಿದ್ದಾರೆ.ಒಂದು ವೇಳೆ ಇಬ್ಬನಿ ಬಿದ್ದರೆ ಚೇಸಿಂಗ್ ಮಾಡುವ ತಂಡವೇ ಇಲ್ಲಿ ನೆಚ್ಚಿನ ತಂಡವಾಗಿರ ಲಿದೆ. ಟಾಸ್ ಗೆಲ್ಲುವ ತಂಡದ ನಾಯಕ ಚೇಸಿಂಗ್‌ ಮಾಡುವ ಕಡೆಗೆ ಹೆಚ್ಚಿನ ಒಲವು ತೋರ ಲಿದ್ದಾರೆ. ಇಲ್ಲಿ ನಡೆದಿರುವ ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎರಡು ಬಾರಿ ಗೆಲುವು ಸಾಧಿಸಿದ್ದು, ಚೇಸಿಂಗ್ ಮಾಡುವ ತಂಡ ಮೂರು ಬಾರಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಇದುವರೆಗೂ ಆರು ಪಂದ್ಯಗಳನ್ನಾಡಿದ್ದು, 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ.

2012ರಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ ಮುನ್ನ ಇಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಭಾರತ 11 ರನ್‌ಗಳಿಂದ ಜಯ ಸಾಧಿಸಿತ್ತು. ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮೂರು ಪಂದ್ಯಗಳಲ್ಲಿ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತ್ತು.

ನರೇಂದ್ರ ಮೋದಿ ಅಂಗಳದಲ್ಲಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ಸಿಗುವುದರಿಂದ ಬ್ಯಾಟರ್ ಗಳಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಮೊದಲ ಎರಡು ಪಂದ್ಯಗಳಲ್ಲಿ ಅವಕಾಶ ಪಡೆಯುವಲ್ಲಿ ವಿಫಲವಾಗಿದ್ದ ಪೃಥ್ವಿ ಶಾ ಇಂದಿನ ಪಂದ್ಯದಲ್ಲಿ ತಂಡದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.ಸಂಭಾವ್ಯ ಬಳಗ: ಶುಭಮನ್ ಗಿಲ್/ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.

 
Read E-Paper click here