Monday, 9th December 2024

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಶತಕ: ದಾಖಲೆ ಬರೆದ ಪಂತ್‌

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಒಟ್ಟು ಮೂರನೇ ಶತಕ ಸಿಡಿಸಿದರು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ 115 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರನಾಗಿ ರಿಷಬ್ ಹೊರಹೊಮ್ಮಿದ್ದಾರೆ. ಇನ್ನು ಶತಕ ಸಿಡಿಸಿದ ಪಂತ್ ಜೋ ರೂಟ್ ಗೆ ಕ್ಯಾಚ್ ನೀಡಿ ಔಟಾದರು.

ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 94 ಓವರ್ ಮುಕ್ತಾಯಕ್ಕೆ 294 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿದೆ.