ಟೀಮ್ ಇಂಡಿಯಾ ಮಾಜಿ ವೇಗಿ ಎಸ್. ಶ್ರೀಶಾಂತ್‌ಗೆ ಪಿತೃ ವಿಯೋಗ
S Sreesanth father dies: ಕೊಚ್ಚಿಯ ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಶುಕ್ರವಾರ ರಾತ್ರಿ 9.45ಕ್ಕೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಅವರ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಿದೇಶದಿಂದ ಸಂಬಂಧಿಕರು ಆಗಮಿಸಿದ ನಂತರ ಭಾನುವಾರ ಕೋತಮಂಗಲದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.
S Sreesanth -
ತಿರುವನಂತಪುರಂ, ಸೆ.12: ಟೀಮ್ ಇಂಡಿಯಾದ ಮಾಜಿ ವೇಗಿ ಎಸ್. ಶ್ರೀಶಾಂತ್ ಅವರ ತಂದೆ ವಿ. ಸಂತಕುಮಾರನ್ ನಾಯರ್ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಶನಿವಾರ ತಿಳಿಸಿವೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಕೊಚ್ಚಿಯ ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಶುಕ್ರವಾರ ರಾತ್ರಿ 9.45ಕ್ಕೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಅವರ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಿದೇಶದಿಂದ ಸಂಬಂಧಿಕರು ಆಗಮಿಸಿದ ನಂತರ ಭಾನುವಾರ ಕೋತಮಂಗಲದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೋತಮಂಗಲದಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ನಾಯರ್ ಅವರು ನಿವೃತ್ತ ಎಲ್‌ಐಸಿ (LIC) ವಲಯ ವ್ಯವಸ್ಥಾಪಕರಾಗಿದ್ದರು. ಅವರು ಪತ್ನಿ ಟಿ.ಎನ್. ಸಾವಿತ್ರಿದೇವಿ ಹಾಗೂ ಮಕ್ಕಳಾದ ದೀಪು, ನಿವೇದಿತಾ, ದಿವ್ಯಾ ಮತ್ತು ಶ್ರೀಶಾಂತ್ ಅವರನ್ನು ಅಗಲಿದ್ದಾರೆ.
ಮಾಜಿ ವೇಗಿ ಶ್ರೀಶಾಂತ್ ಮೇಲಿನ 3 ವರ್ಷಗಳ ನಿಷೇಧ ಹಿಂಪಡೆದ ಕೇರಳ ಕ್ರಿಕೆಟ್ ಸಂಸ್ಥೆ
ಶ್ರೀಶಾಂತ್ 2005-2011ರ ಅವಧಿಯಲ್ಲಿ ಭಾರತದ ಪರ 27 ಟೆಸ್ಟ್, 53 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನಾಡಿದ್ದಾರೆ. ಕ್ರಮವಾಗಿ 87, 75 ಹಾಗೂ 7 ವಿಕೆಟ್ ಉರುಳಿಸಿದ್ದಾರೆ. 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯನೆಂಬುದು ಶ್ರೀಶಾಂತ್ ಪಾಲಿನ ಹೆಗ್ಗಳಿಕೆ. 2011ರಲ್ಲಿ ಕೊನೆಯ ಸಲ ಭಾರತವನ್ನು ಪ್ರತಿನಿಧಿಸಿದ್ದರು. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದ ಶ್ರೀಶಾಂತ್ 40 ವಿಕೆಟ್ ಕಬಳಿಸಿ ಮಿಂಚಿದ್ದರು.
2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸದಸ್ಯರಾಗಿದ್ದಾಗ ಶ್ರೀಶಾಂತ್ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು. ಫಿಕ್ಸಿಂಗ್ ಆರೋಪ ಕೇಳಿ ಬಂದ ಕಾರಣ ಬಿಸಿಸಿಐ ಶ್ರೀಶಾಂತ್‌ಗೆ ಆಜೀವ ನಿಷೇಧ ಹೇರಿತ್ತು. ಸುದೀರ್ಘ ವಿಚಾರಣೆಯ ನಂತರ ದೆಹಲಿ ಹೈಕೋರ್ಟ್ ಇವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.