ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅತ್ಯಾಚಾರ ಪ್ರಕರಣ; ಬಂಧನ ಭೀತಿಯಲ್ಲಿ ಮುಂಬೈ ಇಂಡಿಯನ್ಸ್‌ ಮಾಜಿ ಆಟಗಾರ

2018ರಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಶಿವಾಲಿಕ್ 18 ಪಂದ್ಯಗಳನ್ನು ಆಡಿದ್ದಾರೆ. ಮೂರು ಶತಕಗಳು ಮತ್ತು 5 ಅರ್ಧಶತಕ ಸಿಡಿಸಿ ಒಟ್ಟಾರೆ 1087 ರನ್ ಗಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದ ಕಾರಣದಿಂದಾಗಿ 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ 20 ಲಕ್ಷ ರೂ.ಗೆ ಖರೀದಿಸಿತು. ಈ ಋತುವಿನ ಮೊದಲು ಅವರನ್ನು ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿತ್ತು.

ಅತ್ಯಾಚಾರ ಪ್ರಕರಣ; ಬಂಧನ ಭೀತಿಯಲ್ಲಿ ಮುಂಬೈ ಇಂಡಿಯನ್ಸ್‌ ಮಾಜಿ ಆಟಗಾರ

Profile Abhilash BC May 3, 2025 10:33 AM

ಜೈಪುರ: ಮುಂಬೈ ಇಂಡಿಯನ್ಸ್‌ ತಂಡದ ಮಾಜಿ ಯುವ ಆಲ್‌ರೌಂಡರ್‌ ಶಿವಾಲಿಕ್ ಶರ್ಮಾ(Shivalik Sharma) ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಶಿವಾಲಿಕ್ ಶರ್ಮಾ ಮದುವೆಯ ನೆಪದಲ್ಲಿ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದು, ಇದೀಗ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಜೋಧ್‌ಪುರ ಜಿಲ್ಲೆಯ ಕುಡಿ ಭಗತ್ಸುನಿ ಹೌಸಿಂಗ್ ಬೋರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿಯನ್ನು ಬಂಧಿಸಲು ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸಿಪಿ ಆನಂದ್ ಸಿಂಗ್, 'ಶಿವಾಲಿಕ್ ಶರ್ಮಾ ಮದುವೆಯ ನೆಪದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಯುವತಿಯ ಜತೆ ದೈಹಿಕ ಸಂಬಂಧ ಬೆಳೆಸಿರುವ ಆರೋಪ ಎದುರಿಸುತ್ತಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಮತ್ತು ನ್ಯಾಯಾಲಯದಲ್ಲಿ ಆಕೆಯ ಹೇಳಿಕೆ ಸೇರಿದಂತೆ ಇತರ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ' ಎಂದರು.

ಯುವತಿ ದೂರಿನಲ್ಲೇನಿದೆ?

ಫೆಬ್ರವರಿ 2023ರಲ್ಲಿ ಗುಜರಾತ್‌ನ ವಡೋದರಾಕ್ಕೆ ಭೇಟಿ ನೀಡಿದಾಗ ಶಿವಾಲಿಕ್ ಶರ್ಮಾ ಪರಿಚಯವಾಗಿತ್ತು. ಅಲ್ಲಿಂದ ಇಬ್ಬರೂ ಸ್ನೇಹಿತರಾದೆವು. ಫೋನ್‌ನಲ್ಲಿ ಮಾತನಾಡುತ್ತಿದ್ದಂತೆ ನಮ್ಮಿಬ್ಬರಲ್ಲಿ ಆಪ್ತತೆ ಹೆಚ್ಚಾಯಿತು. ಇದಾದ ನಂತರ, ನಮ್ಮಿಬ್ಬರ ಪೋಷಕರು ಪರಸ್ಪರ ಭೇಟಿಯಾದರು. ಶಿವಾಲಿಕ್ ಅವರ ಪೋಷಕರು ಆಗಸ್ಟ್ 2023ರಲ್ಲಿ ಜೋಧ್‌ಪುರಕ್ಕೆ ಬಂದಿದ್ದರು. ಇದಾದ ನಂತರ, ಇಬ್ಬರ ಒಪ್ಪಿಗೆಯೊಂದಿಗೆ ನಿಶ್ಚಿತಾರ್ಥ ಕೂಡ ನಡೆಯಿತು.

ಇದನ್ನೂ ಓದಿ IPL 2025: ಸಚಿನ್‌ ದಾಖಲೆ ಮುರಿದ ಸಾಯಿ ಸುದರ್ಶನ್‌

ನಿಶ್ಚಿತಾರ್ಥದ ನಂತರ, ಶಿವಾಲಿಕ್ ಜೋಧ್‌ಪುರಕ್ಕೆ ಹಿಂತಿರುಗುವ ಮುನ್ನ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದರು. ಬಳಿಕ ಇಬ್ಬರೂ ರಾಜಸ್ಥಾನದ ಅನೇಕ ಸ್ಥಳಗಳಿಗೆ ಭೇಟಿ ನೀಡಿದೆವು. ಆಗಸ್ಟ್ 2024ರಲ್ಲಿ ತನ್ನನ್ನು ವಡೋದರಾಕ್ಕೆ ಕರೆಸಿಕೊಂಡಾಗ ಭವಿಷ್ಯದ ದೃಷ್ಟಿಯಿಂದ ಈ ಸಂಬಂಧ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿ ದೂರವಾಗಿದ್ದಾರೆ. ಮದುವೆ ನೆಪದಲ್ಲಿ ನಿಶ್ಚಿತಾರ್ಥಕ್ಕೂ ಮುನ್ನ ತನ್ನೊಂದಿಗೆ ಬಲವಂತವಾಗಿ ದೈಹಿಕ ಸಂಬಂಧ ಹೊಂದಿದ್ದ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಯುವತಿ ದೂರಿನಲ್ಲಿ ಒತ್ತಾಯಿಸಿದ್ದಾರೆ.

2018ರಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಶಿವಾಲಿಕ್ 18 ಪಂದ್ಯಗಳನ್ನು ಆಡಿದ್ದಾರೆ. ಮೂರು ಶತಕಗಳು ಮತ್ತು 5 ಅರ್ಧಶತಕ ಸಿಡಿಸಿ ಒಟ್ಟಾರೆ 1087 ರನ್ ಗಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದ ಕಾರಣದಿಂದಾಗಿ 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ 20 ಲಕ್ಷ ರೂ.ಗೆ ಖರೀದಿಸಿತು. ಈ ಋತುವಿನ ಮೊದಲು ಅವರನ್ನು ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿತ್ತು.