ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RR vs SRH: ಎಲಿಮಿನೇಟರ್‌ನಲ್ಲಿ ಹೈದರಾಬಾದ್‌ ಸೋಲುತ್ತಿದ್ದಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

Frustrated Kavya Maran: ಕಾವ್ಯ, ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಪ್ರತಿ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

Kavya Maran

ಮುಲ್ಲನಪುರ, ಮೇ 28: ಮಹಾರಾಜ ಯಾದವೀಂದ್ರಸಿಂಗ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದಿದ್ದ ಐಪಿಎಲ್ ಟೂರ್ನಿಯ ಎಲಿಮಿನೇಟರ್(IPL Eliminator 2026) ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್(RR vs SRH) ಎದುರು ರಾಜಸ್ಥಾನ ತಂಡವು 47 ರನ್‌ಗಳಿಂದ ಜಯಿಸಿತು. ಸನ್‌ರೈಸರ್ಸ್ ಅಭಿಯಾನಕ್ಕೆ ತೆರೆಬಿತ್ತು. ಟೂರ್ನಿಯಿಂದ ತಂಡ ಹೊರಬೀಳುತ್ತಿದ್ದಂತೆ ಫ್ರಾಂಚೈಸಿಯ ಮಾಲಕಿ ಕಾವ್ಯ ಮಾರನ್‌ ಬೇಸರದಿಂದ ಕಣ್ಣೀರು(Frustrated Kavya Maran) ಸುರಿಸಿದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಾವ್ಯ, ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಪ್ರತಿ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರದಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ, ಗೆದ್ದಾಗ ಕುಣಿದು ಕುಪ್ಪಳಿಸುವ ಹಲವು ವಿಡಿಯೊ ಮತ್ತು ಫೋಟೊಗಳು ಆಗಾಗ ವೈರಲ್‌ ಆಗುತ್ತಿರುತ್ತದೆ.



ಪಂದ್ಯದ ಬಗ್ಗೆ ಹೇಳುವುದಾದದರೆ, ಟಾಸ್ ಗೆದ್ದ ಸನ್‌ರೈಸರ್ಸ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. 15 ವರ್ಷದ ಸೂರ್ಯವಂಶಿ ಸಿಕ್ಸರ್‌ಗಳ ಮಳೆಯನ್ನೇ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್‌ಗಳನ್ನು ಸೂರೆ ಮಾಡಿದರು. ಧ್ರುವ ಜುರೇಲ್ (50) ಬಿರುಸಿನ ಅರ್ಧಶತಕ ಗಳಿಸಿದರು. ಇದರಿಂದಾಗಿ ರಾಯಲ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 243 ರನ್ ಗಳಿಸಿತು. ಬೃಹತ್‌ ಮೊತ್ತ ಬೆನ್ನಟ್ಟಿದ ಸನ್‌ರೈಸರ್ಸ್ ತಂಡವು 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಹೋರಾಟ ಮುಗಿಸಿತು.

ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ತಂಡಕ್ಕೆ ವೇಗಿ ಜೋಫ್ರಾ ಆರ್ಚರ್ ಮೊದಲ ಓವರ್‌ನಲ್ಲಿಯೇ ಆಘಾತವಿಕ್ಕಿದರು. ಅಪಾಯಕಾರಿ ಅಭಿಷೇಕ್ ಶರ್ಮಾ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್‌ಗೆ ಅಟ್ಟಿದರು. ಬಳಿಕ ಟ್ರಾವಿಸ್ ಹೆಡ್ (17 ರನ್) ಮತ್ತು ಇಶಾನ್ ಕಿಶನ್ (33 ರನ್) ಅವರಿಬ್ಬರಿಗೂ ಡಗ್‌ಔಟ್ ದಾರಿ ತೋರಿಸಿದರು. ಅಭಿಷೇಕ್‌ ಶರ್ಮ ಶೂನ್ಯಕ್ಕೆ ಔಟ್‌ ಆದದ್ದು ಹೈದರಾಬಾದ್‌ ತಂಡಕ್ಕೆ ದೊಡ್ಡ ಹಿನ್ನಡೆಯ ಉಂಟುಮಾಡಿತು.