ಕೊಲಂಬೊ, ಫೆ.16: ಭಾನುವಾರ ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಭಾರತ(IND vs PAK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 61 ರನ್‌ಗಳಿಂದ ಸೋಲಿಸುವ ಮೂಲಕ ಟಿ20 ವಿಶ್ವಕಪ್(T20 World Cup 2026)ಗಳ ಇತಿಹಾಸದಲ್ಲಿ ತನ್ನ ಗೆಲುವಿನ ದಾಖಲೆಯನ್ನು 8ಕ್ಕೆ ವಿಸ್ತರಿಸಿತು.
ಪಾಕಿಸ್ತಾನವನ್ನು ಮಣಿಸಿ ಭಾರತ ಸೂಪರ್ 8ಕ್ಕೆ ಲಗ್ಗೆಯಿಟ್ಟ ಬೆನ್ನಲೇ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದೇ ವೇಳೆ, ಮಾಜಿ ಐಪಿಎಲ್ ಆಯುಕ್ತ ಲಲಿತ್ ಮೋದಿ, ಮೈದಾನದಲ್ಲಿ ಟೀಮ್ ಇಂಡಿಯಾದ ಅನುಕರಣೀಯ ಪ್ರದರ್ಶನವನ್ನು ಅಭಿನಂದಿಸಿದರು. ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಕಾರ್ಯತಂತ್ರವನ್ನು ಸಹ ಅವರು ಶ್ಲಾಘಿಸಿದರು.
ಭಾರತದ ಗೆಲುವಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಲಲಿತ್ ಮೋದಿ, "ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಿರೀಕ್ಷೆಯಂತೆ ಜಯಗಳಿಸಿದ ಟೀಮ್ ಇಂಡಿಯಾಗೆ ಮತ್ತು ಕೋಚ್ ಗಂಭೀರ್ ಅವರಿಗೆ ಅಭಿನಂದನೆಗಳು" ಎಂದು ಬರೆದಿದ್ದಾರೆ.
ಲಲಿತ್ ಮೋದಿ ಅವರ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಮುಖ್ಯ ತರಬೇತುದಾರ ಗಂಭೀರ್ "ನಿಮ್ಮ ಶುಭಾಶಯಗಳಿಗೆ ತುಂಬಾ ಧನ್ಯವಾದಗಳು!" ಎಂದು ಬರೆದಿದ್ದಾರೆ.
ಭಾನುವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇಶಾನ್ ಕಿಶನ್ ಅವರ 77 ರನ್ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ, 175/7 ಸ್ಪರ್ಧಾತ್ಮಕ ಮೊತ್ತವನ್ನು ಗಳಿಸಿತು. ಗುರಿ ಹಿಂಬಾಲಿಸಿದ ಪಾಕಿಸ್ತಾನ 114 ರನ್‌ಗೆ ಸರ್ವಪತನ ಕಂಡಿತು. ಪಾಕಿಸ್ತಾನ ತಂಡವು ಸೂಪರ್ 8 ಹಂತಕ್ಕೆ ತಲುಪಲು ಇದೇ 18ರಂದು ಕೊಲಂಬೊದಲ್ಲಿ ನಡೆಯುವ ನಮೀಬಿಯಾ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
IND vs PAK: ಪಾಕಿಸ್ತಾನ ವಿರುದ್ಧ ವಿಶೇಷ ದಾಖಲೆ ಬರೆದ ಭಾರತ
ಪಂದ್ಯದ ಟಾಸ್ ಸಂದರ್ಭದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ಅಲಿ ಆಘಾ ಅವರು ಹಸ್ತಲಾಘವ ಮಾಡಲಿಲ್ಲ ‘ಹಸ್ತಲಾಘವ ಮಾಡದಿರುವ ನೀತಿಯನ್ನು ಇಲ್ಲಿಯೂ ಮುಂದುವರಿಸಿದ್ದೇವೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಷ್ಯಾಕಪ್‌ನಲ್ಲಿಯೂ ಭಾರತೀಯ ಆಟಗಾರರು ಪಾಕ್ ಆಟಗಾರರ ಕೈ ಕುಲುಕಿರಲಿಲ್ಲ.