Saturday, 14th December 2024

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಎದೆನೋವು ಕಾಣಿಸಿಕೊಂಡ ಹಿನ್ನಲೆ ಯಲ್ಲಿ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿ, ಎರಡು ಸ್ಟೆಂಟ್ಅಳವಡಿಸಲಾಗಿತ್ತು. ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ, ಡಾ.ಅಶ್ವಿನ್ ಮೆಹ್ತಾ ಸೇರಿದಂತೆ ವೈದ್ಯರ ತಂಡ ಕಳದ ಗುರುವಾರ ಶಸ್ತ್ರಚಿಕಿತ್ಸೆ ನಡೆಸಿತ್ತು.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸದ್ಯ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.