Thursday, 12th December 2024

ಸೌರವ್ ಗಂಗೂಲಿ ಆರೋಗ್ಯ ಸ್ಥಿರ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ ಸೌರವ್ ಗಂಗೂಲಿ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಂಗೂಲಿ ಅವರ ಕುಟುಂಬ ವರ್ಗದವರ ಜೊತೆಗೆ ಮಾತನಾಡಿದ್ದು, ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಸೌರವ್ ಗಂಗೂಲಿ ಬೇಗನೆ ಗುಣಮುಖರಾಗಲಿ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡಾ ಟ್ವೀಟ್ ಮಾಡಿದ್ದಾರೆ.