IPL 2025: ರೋಹಿತ್ ಶರ್ಮ ಹಿಂದಿಕ್ಕಿ ಅನಗತ್ಯ ದಾಖಲೆ ಬರೆದ ಮ್ಯಾಕ್ಸ್‌ವೆಲ್
ಪಂಜಾಬ್ ವಿರುದ್ಧ ಗುಜರಾತ್ ತಂಡ, ಸಾಯ್ ಸುಂದರ್ಶನ್ (74 ರನ್) ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಉತ್ತಮ ಪ್ರದರ್ಶನದ ಹೊರತಾಗಿಯೂ ಡೆತ್ ಓವರ್‌ಗಳಲ್ಲಿನ ವೈಫಲ್ಯದಿಂದ 5 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.


ಅಹಮದಾಬಾದ್: ಮಂಗಳವಾರ ನಡೆದ ದೊಡ್ಡ ಮೊತ್ತದ ಐಪಿಎಲ್(IPL 2025) ಮೇಲಾಟದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್(GT vs PBKS) ವಿರುದ್ಧ 11 ರನ್ ಅಂತರದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಶೂನ್ಯ ಸುತ್ತಿದ ಗ್ಲೆನ್ ಮ್ಯಾಕ್ಸ್‌ವೆಲ್(Glenn Maxwell) ಐಪಿಎಲ್‌ನಲ್ಲಿ ಕೆಟ್ಟ ದಾಖಲೆಯೊಂದಕ್ಕೆ ಕೊರಳೊಡ್ಡಿದರು. ಐಪಿಎಲ್‌ನಲ್ಲಿ ಅತ್ಯಧಿಕ 19 ಬಾರಿ ಶೂನ್ಯ ಸುತ್ತುವ ಮೂಲಕ ಅಗ್ರಸ್ಥಾನಕ್ಕೇರಿದರು. ರೋಹಿತ್ ಶರ್ಮ ಮತ್ತು ದಿನೇಶ್ ಕಾರ್ತಿಕ್ ತಲಾ 18 ಶೂನ್ಯ ಸಂಪಾದನೆಯೊಂದಿಗೆ ಜಂಟಿ ದ್ವಿತೀಯ ಸ್ಥಾನದಲ್ಲಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಾಯಕ ಶ್ರೇಯಸ್ ಅಯ್ಯರ್ (97* ರನ್) ಅಬ್ಬರದ ಬ್ಯಾಟಿಂಗ್ ಬಲದಿಂದ 5 ವಿಕೆಟ್ ನಷ್ಟಕ್ಕೆ 243 ರನ್ ಕಲೆ ಹಾಕಿತ್ತು. ಗುರಿ ಹಿಂಬಾಲಿಸಿದ ಗುಜರಾತ್, ಸಾಯ್ ಸುಂದರ್ಶನ್ (74 ರನ್) ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಉತ್ತಮ ಪ್ರದರ್ಶನದ ಹೊರತಾಗಿಯೂ ಡೆತ್ ಓವರ್‌ಗಳಲ್ಲಿನ ವೈಫಲ್ಯದಿಂದ 5 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.
ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಅಯ್ಯರ್ 230.95ರ ಸ್ಟ್ರೈಕ್ ರೇಟ್‌ನಲ್ಲಿ ಆಡುವ ಮೂಲಕ ಎಲ್ಲರ ಗಮನವನ್ನು ಸೆಳೆದರು. ಅವರು ಕೇವಲ 42 ಎಸೆತಗಳಲ್ಲಿ ಬರೋಬ್ಬರಿ 9 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ ಅಜೇಯ 97 ರನ್‌ಗಳನ್ನು ಸಿಡಿಸಿದರು. ಡೆತ್ ಓವರ್‌ಗಳಲ್ಲಿ ಸ್ಪೋಟಕ ಬ್ಯಾಟ್ ಮಾಡಿದ್ದ ಶಶಾಂಕ್ ಸಿಂಗ್ ಕೇವಲ 16 ಎಸೆತಗಳಲ್ಲಿ ಅಜೇಯ 44 ರನ್‌ಗಳನ್ನು ಸಿಡಿಸಿದರು. ಇವರಿಬ್ಬರ ಜೊತೆಗೆ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ 23 ಎಸೆತಗಳಲ್ಲಿ 47 ರನ್ ಸಿಡಿಸಿ ಪಂಜಾಬ್‌ಗೆ ಉತ್ತಮ ಆರಂಭ ತಂದುಕೊಟ್ಟರು.
ಇದನ್ನೂ ಓದಿ IPL 2025: ಅಜೇಯ 97 ರನ್ ಗಳಿಸಿ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದ ಶ್ರೇಯಸ್ ಅಯ್ಯರ್!
ಗುಜರಾತ್ ಪರ ಸಾಯಿ ಶುದರ್ಶನ್ 74, ಜೋಸ್ ಬಟ್ಲರ್ 54, ಋದರ್‌ಫೋರ್ಡ್ 46, ನಾಯಕ ಶುಭಮನ್ ಗಿಲ್ 34 ರನ್ ಬಾರಿಸಿದರು.