Thursday, 12th December 2024

ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ

ಸಿಡ್ನಿ: ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಆಸಿಸ್ ನಾಯಕ ಆಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ ಪಡೆದಿದ್ದು, ಡೇವಿಡ್ ವಾರ್ನರ್ ಮತ್ತು ನಾಯಕ ಫಿಂಚ್ ಭರ್ಜರಿ ಆರಂಭ ನೀಡಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ 14.1 ಓವರ್ ಗೆ ಆಸಿಸ್ ಪಡೆ ವಿಕೆಟ್ ನಷ್ಟವಿಲ್ಲದೇ 73 ರನ್ ಗಳಿಸಿದೆ. 37 ಎಸೆತದಲ್ಲಿ 33 ರನ್ ಗಳಿಸಿರುವ ಡೇವಿಡ್ ವಾರ್ನರ್ ಮತ್ತು 49 ಎಸೆತಗಳಲ್ಲಿ 35 ರನ್ ಗಳಿಸಿರುವ ಫಿಂಚ್ ಕ್ರೀಸ್ ಕಾಯ್ದುಕೊಂಡಿದ್ದಾರೆ.