IPL 2025 Points Table: ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ
ಐಪಿಎಲ್‌ನಲ್ಲಿ(IPL 2025) ಇಂದು ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್(DC vs SRH) ಸೆಣಸಾಟ ನಡೆಸಿದರೆ, ದಿನದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್(RR vs CSK) ಮುಖಾಮುಖಿಯಾಗುತ್ತಿದೆ.


ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್(IPL 2025)ನಲ್ಲಿ 9 ಪಂದ್ಯಗಳು ಮುಕ್ತಾಯ ಕಂಡಿದೆ. ಶನಿವಾರ ನಡೆದಿದ್ದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT vs MI) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್ ಅಂತರದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಇದೀಗ ಗುಜರಾತ್ ಗೆಲುವಿನಿಂದ ಅಂಕಪಟ್ಟಿ(IPL 2025 Points Table)ಯಲ್ಲಿ ಬದಲಾವಣೆ ಸಂಭವಿಸಿದೆ. ಅಗ್ರಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆರ್‌ಸಿಬಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಆದರೆ ಕೆಲ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ.
9ನೇ ಸ್ಥಾನದಲ್ಲಿದ್ದ ಗುಜರಾತ್ ತಂಡ ಗೆಲುವಿನ ಬಳಿಕ ಮೂರನೇ ಸ್ಥಾನಕ್ಕೇರಿದೆ. ಮೂರನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನಕ್ಕಿಳಿದಿದೆ. ಸತತ ಎರಡು ಸೋಲು ಕಂಡ ಮುಂಬೈ ಇಂಡಿಯನ್ಸ್ 9ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ ತಂಡ ಕೊನೆಯ ಸ್ಥಾನದಲ್ಲಿದೆ.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಿಕೋಲಸ್ ಪೂರನ್ ಆರೆಂಜ್ ಕ್ಯಾಪ್ ಹೊಂದಿದ್ದರೆ, ನೂರ್ ಅಹ್ಮದ್ ಪರ್ಪಲ್ ಕ್ಯಾಪ್ ಪಡೆದಿದ್ದಾರೆ.
IPL 2025 POINTS TABLE. 📈 pic.twitter.com/54RFkYmnlb
— Mufaddal Vohra (@mufaddal_vohra) March 29, 2025
ಐಪಿಎಲ್‌ನಲ್ಲಿ(IPL 2025) ಇಂದು ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್(DC vs SRH) ಸೆಣಸಾಟ ನಡೆಸಿದರೆ, ದಿನದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್(RR vs CSK) ಮುಖಾಮುಖಿಯಾಗುತ್ತಿದೆ. ತಂದೆಯಾದ ಬಳಿಕ ಕನ್ನಡಿಗ ರಾಹುಲ್ ಆಡುತ್ತಿರುವ ಈ ಬಾರಿಯ ಮೊದಲ ಐಪಿಎಲ್ ಪಂದ್ಯ ಇದಾಗಿದೆ.