Saturday, 4th January 2025

Happy New Year 2025: ಸಿಡ್ನಿಯಲ್ಲಿ ಕೊಹ್ಲಿ ದಂಪತಿ ಜತೆ ಹೊಸ ವರ್ಷ ಸಂಭ್ರಮಿಸಿದ ಪಡಿಕ್ಕಲ್‌, ಪ್ರಸಿದ್ಧ್‌ ಕೃಷ್ಣ

ಸಿಡ್ನಿ: ಟೀಮ್‌ ಇಂಡಿಯಾದ ಸ್ಟಾರ್‌ ಬ್ಯಾಟರ್ ವಿರಾಟ್ ಕೊಹ್ಲಿ(Virat Kohli) ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಸಿಡ್ನಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ(Happy New Year 2025) ಮಾಡಿದ್ದಾರೆ. ಇವರ ಜತೆ ಕನ್ನಡಿಗರಾದ ದೇವದತ್ತ ಪಡಿಕ್ಕಲ್‌ ಮತ್ತು ಪ್ರಸಿದ್ಧ್‌ ಕೃಷ್ಣ ಕೂಡ ಪಾಲ್ಗೊಂಡಿದ್ದರು. ಸಿಡ್ನಿಯ ರೆಸ್ಟೋರೆಂಟ್‌ಗೆ ಸಂಭ್ರಮಾಚರಣೆ ತೆರಳುತ್ತಿರುವ ವಿಡಿಯೊ ವೈರಲ್‌ ಆಗಿದೆ.

ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಕೂಡ ಸಿಡ್ನಿಯ ಬೀಚ್‌ ಒಂದರಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಿದ್ದು ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ, ನೆಮ್ಮದಿಯನ್ನು ಹೊತ್ತು ತರಲಿ. ಕಳೆದ ವರ್ಷದ ನೋವನ್ನು ಮರೆಯೋಣ, ಹೊಸ ವರ್ಷದ ಹೊಸ ಕನಸಿನೊಂದಿಗೆ ಮುಂದಕ್ಕೆ ಹೆಜ್ಜೆ ಇಡೋಣ ಎಂದು ಶುಭ ಹಾರೈಸಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.