Thursday, 12th December 2024

ರಾಜ್ಯಸಭೆಗೆ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಎಂಟ್ರಿ !

ಚಂಡೀಗಢ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ.

ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ 5 ಸ್ಥಾನಗಳ ಪೈಕಿ ಒಂದು ಸ್ಥಾನ ಹರ್ಭಜನ್ ಸಿಂಗ್ ಗೆ ನೀಡಲಿದೆ ಎಂದು ಹೇಳಿದೆ.

ಹರ್ಭಜನ್ ಸಿಂಗ್’ರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವ ಜೊತೆಗೆ ರಾಜ್ಯದ ಕ್ರೀಡಾ ಸಂಸ್ಥೆಗಳ ಜವಾಬ್ದಾರಿ ವಹಿ ಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.