ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hardik Pandya: ಹೊಸ ಹೇರ್​ಸ್ಟೈಲ್​ನಿಂದ ಗಮನಸೆಳೆದ ಹಾರ್ದಿಕ್​ ಪಾಂಡ್ಯ

Hardik Pandya new hairstyle: ಶುಕ್ರವಾರದಿಂದ ಟೀಮ್‌ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಕೋಚ್‌ ಗೌತಮ್‌ ಗಂಭೀರ್‌ ಮಾರ್ಗದರ್ಶನದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ ಸೇರಿ ಎಲ್ಲ ಆಟಗಾರರು ಲಘು ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಅಭ್ಯಾಸ ನಡೆಸಿದರು. ಶನಿವಾರದಿಂದ ಕಠಿಣ ಅಭ್ಯಾಸದಲ್ಲಿ ತೊಡಗಿಕೊಳ್ಳಲಿದ್ದಾರೆ. ಏಷ್ಯಾಕಪ್​ನಲ್ಲಿ ಭಾರತ ತಂಡ ಸೆ.10ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.

ದುಬೈ: ಸೆ.9ರಿಂದ ಆರಂಭಗೊಳ್ಳಲಿರುವ ಏಷ್ಯಾ ಕಪ್‌ ಕ್ರಿಕೆಟ್‌(Asia Cup 2025) ಟೂರ್ನಿಗೆ ಭಾರತ ತಂಡದ ಆಟಗಾರರು ಈಗಾಗಲೇ ದುಬೈ ತಲುಪಿದ್ದಾರೆ. ಟೀಮ್​ ಇಂಡಿಯಾ ಆಲ್ರೌಂಡರ್​ ಹಾರ್ದಿಕ್​ ಪಾಂಡ್ಯ(Hardik Pandya) ಹೊಸ ಕೇಶವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದಾರೆ. ಅವರ ಈ ಹೊಸ ಕೇಶವಿನ್ಯಾಸ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೆಂಡ್‌ ಆಗಿದೆ.

ಮರಳು ಹೊಂಬಣ್ಣದ ಅವರ ಶಾರ್ಟ್​ ಹೇರ್​ಕಟ್​ನ ಚಿತ್ರಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಪ್ರಕಟಿಸಿರುವ ಹಾರ್ದಿಕ್ 'ನ್ಯೂ ಮಿ' ಎಂದು ಬರೆದುಕೊಂಡಿದ್ದಾರೆ. ಈ ಕೇಶ ವಿನ್ಯಾಸದಲ್ಲಿ ಪಾಂಡ್ಯ ಪಾಪ್‌ ಸಿಂಗರ್‌ನಂತೆ ಕಾಣಿಸಿಕೊಂಡಿದ್ದಾರೆ.

ಶುಕ್ರವಾರದಿಂದ ಟೀಮ್‌ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಕೋಚ್‌ ಗೌತಮ್‌ ಗಂಭೀರ್‌ ಮಾರ್ಗದರ್ಶನದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ ಸೇರಿ ಎಲ್ಲ ಆಟಗಾರರು ಲಘು ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಅಭ್ಯಾಸ ನಡೆಸಿದರು. ಶನಿವಾರದಿಂದ ಕಠಿಣ ಅಭ್ಯಾಸದಲ್ಲಿ ತೊಡಗಿಕೊಳ್ಳಲಿದ್ದಾರೆ. ಏಷ್ಯಾಕಪ್​ನಲ್ಲಿ ಭಾರತ ತಂಡ ಸೆ.10ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.

ಈ ಬಾರಿ ಟೂರ್ನಿ ಟಿ20 ಸ್ವರೂಪದಲ್ಲಿ ನಡೆಯಲಿರುವ ಕಾರಣ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಆಟ ಕಣ್ತುಂಬಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಅವರು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಯುವ ಆಟಗಾರರ ನೇತೃತ್ವದಲ್ಲಿ ಪಂದ್ಯಗಳು ನಡೆಯಲಿದೆ.

ಇದನ್ನೂ ಓದಿ Asia Cup 2025: ಭಾರತ ತಂಡದಲ್ಲಿರುವ ಮೌಲ್ಯಯುತ ಆಟಗಾರನನ್ನು ಹೆಸರಿಸಿದ ಅಜಿಂಕ್ಯಾ ರಹಾನೆ!

8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಮತ್ತು ಒಮಾನ್ ತಂಡಗಳಿದ್ದರೆ, 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮತ್ತು ಹಾಂಗ್ ಕಾಂಗ್ ಕಾಣಿಸಿಕೊಂಡಿದೆ.