Wednesday, 11th December 2024

ವಿಶ್ವಕಪ್ ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಔಟ್‌…!

ಮುಂಬೈ: ಟೀಮ್ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ಹಾರ್ದಿಕ್ ಪಾಂಡ್ಯ ಸಂಪೂರ್ಣ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರ ಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್‌ಗೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ಹಾರ್ದಿಕ್ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಬೀಳುವಂತಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಸಂದರ್ಭದಲ್ಲಿ ಕಾಲಿನ ನೋವಿಗೆ ತುತ್ತಾಗಿದ್ದರು. ಕೇವಲ ಮೂರು ಎಸೆತ ಬೌಲಿಂಗ್ ಮಾಡಿದ್ದ ಅವರು ನಂತರ ಮೈದಾನ ತೊರೆದಿದ್ದರು.

ಹಾರ್ದಿಕ್ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಪ್ರತಿಭಾನ್ವಿತ ವೇಗಿಗೆ ಅದೃಷ್ಟ ಖುಲಾಯಿಸಿದೆ. ಪ್ರಸಿದ್ಧ್ ಕೃಷ್ಣ ಜಸ್ಪ್ರೀತ್ ಬೂಮ್ರಾ ಜೊತೆಗೆ ಖಳೆದ ಐರ್ಲೆಂಡ್ ಪ್ರವಾಸದ ಮೂಲಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ್ದರು.