ದುಬೈ: ಅಂಡರ‍್ 19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಕಿರಿಯರ ತಂಡ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭರ್ಜರಿ ಜಯ ಗಳಿಸಿದ್ದು, ಶುಭಾರಂಭ ಮಾಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ನಿಗದಿತ ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 282 ರನ್ ಗಳಿಸಿತ್ತು.
ಗುರಿ ಬೆನ್ನಟ್ಟಿದ ಯುಎಇ ತಂಡವು ಕೇವಲ 34.3 ಓವರ್ ಗಳಲ್ಲಿ 128 ರನ್ ಗಳಿಸಿ, ತನ್ನೆಲ್ಲ ವಿಕೆಟ್ ಒಪ್ಪಿಸಿತು. ಈ ಮೂಲಕ ಭಾರತ 154 ರನ್ ಗಳ ಭರ್ಜರಿ ಜಯ ಸಾಧಿಸಿತು.
ಭಾರತದ ಆರಂಭ ಉತ್ತಮವಾಗಿತ್ತು. ಹರ್ನೂರ್ ಸಿಂಗ್ 120 ರನ್ ಸಿಡಿಸಿ ಮಿಂಚಿದರು. ನಾಯಕ ಯಶ್ ಧುಲ್ 68 ಎಸೆತಗಳಲ್ಲಿ 63 ರನ್ ಸಿಡಿಸಿದರು. ಅಲ್ಲದೇ, ಹರ್ನೂರ್ ಸಿಂಗ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ರಾಜವರ್ಧನ್ ಹಂಗಾರ್ಗೆಕರ್ 3 ವಿಕೆಟ್ ಕಬಳಿಸಿದ್ದಲ್ಲದೆ, ಬ್ಯಾಟಿಂಗ್ ನಲ್ಲಿಯೂ 48 ರನ್ ಗಳಿಸಿ ಮಿಂಚಿದರು.
ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಈ ಸರಣಿ ಮಹತ್ವ ಪಡೆದುಕೊಂಡಿದೆ.