Friday, 22nd November 2024

ಏಷ್ಯಾಕಪ್’ಗೆ ಭಾರತ: ಗೃಹ ಸಚಿವಾಲಯವೇ ನಿರ್ಧರಿಸಲಿದೆ- ಅನುರಾಗ್ ಠಾಕೂರ್

ಮುಂಬೈ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಏಕದಿನ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸ ಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸ್ಪಷ್ಟಪಡಿಸಿದ್ದಾರೆ.

ಆಟಗಾರರ ಭದ್ರತೆಯ ಪ್ರಶ್ನೆಯಾಗಿರುವುದರಿಂದ ಗೃಹ ಸಚಿವಾಲಯ ನಿರ್ಧರಿಸಲಿದೆ.

ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಭಾರತಕ್ಕೆ ಬಂದು ಆಡಲಿದೆ ಎಂದು ಹೇಳಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ತೆರಳುವು ದಿಲ್ಲ. ಬದಲಾಗಿ ತಟಸ್ಥ ಸ್ಥಳದಲ್ಲಿ ಭಾರತ ಆಡಲು ಸಿದ್ದವಿದೆ ಎಂದು ಹೇಳಿದ್ದರು.

ಈ ಕುರಿತು ಆಕ್ಷೇಪ ಎತ್ತಿದ ಪಾಕಿಸ್ತಾನ ಕಿಕ್ರೆಟ್ ಮಂಡಳಿ ಒಂದು ವೇಳೆ ಭಾರತ ಏಷ್ಯಾ ಕಪ್ ಆಡಲು ಪಾಕಿಸ್ತಾನಕ್ಕೆ ಬಾರದಿದ್ದರೆ ಭಾರತದಲ್ಲಿ ನಡೆಯುವ ವಿಶ್ವಕಪ್ ಟೂರ್ನಿ ಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಒಡ್ಡಿತ್ತು.