ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ನಂತರ ಭಾರತ ಮಹಿಳಾ ತಂಡದ T20 ವಿಶ್ವಕಪ್ ಸೆಮಿಫೈನಲ್‌ ಅರ್ಹತಾ ಲೆಕ್ಕಾಚಾರ ಹೇಗಿದೆ?

Womens T20 World Cup 2026: ಗುಂಪು ಎ ವಿಭಾಗದಲ್ಲಿ ಆಸ್ಟ್ರೇಲಿಯಾ ತಂಡವು ಆಡಿರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ, ಭಾರತ ಮತ್ತು ಬಾಂಗ್ಲಾದೇಶ ಮೂರು ಪಂದ್ಯಗಳಿಂದ ತಲಾ ನಾಲ್ಕು ಅಂಕಗಳನ್ನು ಗಳಿಸಿದ್ದರೆ, ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ತಮ್ಮ ಮೂರು ಪಂದ್ಯಗಳಲ್ಲಿಯೂ ಸೋತಿವೆ.

Harmanpreet Kaur

ಲಂಡನ್‌, ಜೂ.22: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026(Womens T20 World Cup 2026) ರ ತನ್ನ ಮೂರನೇ ಗ್ರೂಪ್ ಎ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿತು. ಶಫಾಲಿ ವರ್ಮಾ ಮತ್ತು ಶ್ರೀ ಚರಣಿ ಅವರ ಅದ್ಭುತ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ, ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ ಅಂತರದ ಸೋಲು ಕಂಡಿತು. ಇದೀಗ ಭಾರತದ ಸೆಮಿ ಫೈನಲ್‌ ಲೆಕ್ಕಾಚಾರ ಹೇಗಿದೆ ಎಂಬ ವರದಿ ಇಲ್ಲಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ, 7 ವಿಕೆಟ್‌ಗೆ 158 ರನ್‌ ರನ್‌ ಬಾರಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರೀಕಾ ಆಲ್‌ರೌಂಡರ್‌ ಮರಿಜಾನೆ ಮರಿಜಾನ್ನೆ ಕಪ್ ಅವರ ಅಜೇಯ ಅರ್ಧಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್‌ಗೆ 161 ರನ್‌ ಬಾರಿಸಿ ಗೆಲುವು ಸಾಧಿಸಿತು. ಸೆಮಿ ಫೈನಲ್‌ ರೇಸ್‌ನಲ್ಲಿ ಉಳಿಯ ಬೇಕಿದ್ದರೆ ಹರಿಣ ಪಡೆಗೆ ಈ ಪಂದ್ಯ ಗೆಲ್ಲಲ್ಲೇ ಬೇಕಿತ್ತು. ಮರಿಜಾನ್ನೆ ಕಪ್ 45 ಎಸೆತಗಳಲ್ಲಿ ಅಜೇಯ 81 ರನ್‌ ಬಾರಿಸಿದರು. ಬೌಲಿಂಗ್‌ನಲ್ಲಿಯೂ ಶ್ರೇಷ್ಠ ಪ್ರದರ್ಶನ ನೀಡಿದ ಅವರು 2 ವಿಕೆಟ್‌ ಕಿತ್ತರು.

ಮ್ಯಾಂಚೆಸ್ಟರ್‌ನಲ್ಲಿನ ಸೋಲು ಭಾರತದ ಸೆಮಿಫೈನಲ್ ಅರ್ಹತೆಯ ಸಾಧ್ಯತೆಗಳನ್ನು ಕುಂಠಿತಗೊಳಿಸಿದೆ. ಭಾರತವು ಪ್ರಸ್ತುತ ಗ್ರೂಪ್ ಎ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ, ಅಗ್ರ-ಎರಡು ಸ್ಥಾನ ಮತ್ತು ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ಭರವಸೆಯನ್ನು ಬಲಪಡಿಸಲು ಅವರು ತಮ್ಮ ಉಳಿದಿರುವ ಎರಡೂ ಗುಂಪು-ಹಂತದ ಪಂದ್ಯಗಳನ್ನು ಗೆಲ್ಲಬೇಕು.

ಮಹಿಳಾ ಟಿ20 ವಿಶ್ವಕಪ್ 2026 ರ ಸ್ವರೂಪದ ಪ್ರಕಾರ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಭಾರತ ತಂಡವು ಗುರುವಾರ (ಜೂನ್ 25) ಓಲ್ಡ್ ಟ್ರಾಫರ್ಡ್‌ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ, ನಂತರ ಭಾನುವಾರ (ಜೂನ್ 28) ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

Women's T20 World Cup: ಮಾರಿಝಾನ್‌ ಕಾಪ್‌ ಆಲ್‌ರೌಂಡರ್‌ ಆಟಕ್ಕೆ ಮಣಿದ ಭಾರತ ವನಿತೆಯರು!

ಭಾರತ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಒಂದನ್ನು ಸೋತರೆ ಮತ್ತು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಎರಡೂ ತಮ್ಮ ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೆ, ಭಾರತವು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುವುದಿಲ್ಲ ಮತ್ತು ಸೆಮಿಫೈನಲ್‌ನಲ್ಲಿ ಸ್ಥಾನ ಕಳೆದುಕೊಳ್ಳುತ್ತದೆ.

ಗುಂಪು ಎ ವಿಭಾಗದಲ್ಲಿ ಆಸ್ಟ್ರೇಲಿಯಾ ತಂಡವು ಆಡಿರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ, ಭಾರತ ಮತ್ತು ಬಾಂಗ್ಲಾದೇಶ ಮೂರು ಪಂದ್ಯಗಳಿಂದ ತಲಾ ನಾಲ್ಕು ಅಂಕಗಳನ್ನು ಗಳಿಸಿದ್ದರೆ, ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ತಮ್ಮ ಮೂರು ಪಂದ್ಯಗಳಲ್ಲಿಯೂ ಸೋತಿವೆ.

ಭಾರತ ತಂಡ 2018 ಮತ್ತು 2023 ರಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿ 2020 ರಲ್ಲಿ ಫೈನಲ್‌ಗೆ ಮುನ್ನಡೆದರೂ 2024 ರಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.