ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜೀವ್ ಗಾಂಧಿ ಕ್ರಿಕೆಟ್ ಕ್ರೀಡಾಂಗಣದ ಸ್ಟ್ಯಾಂಡ್‌ನಿಂದ ಅಜರುದ್ದೀನ್ ಹೆಸರು ತೆಗೆಯಲು ನಿರ್ಧಾರ

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಹಿತಾಸಕ್ತಿ ಸಂಘರ್ಷದಿಂದಾಗಿ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಸ್ಟ್ಯಾಂಡ್‌ನಿಂದ ಭಾರತದ ಮಾಜಿ ನಾಯಕ ಹಾಗೂ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಕ್ರೀಡಾಂಗಣದ ಸ್ಟ್ಯಾಂಡ್‌ನಿಂದ ಅಜರುದ್ದೀನ್ ಹೆಸರು ತೆಗೆಯಲು ನಿರ್ಧಾರ

Profile Abhilash BC Apr 20, 2025 12:59 PM

ಹೈದರಾಬಾದ್‌: ಇಲ್ಲಿನ ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಸ್ಟ್ಯಾಂಡ್‌ನಿಂದ ಭಾರತದ ಮಾಜಿ ನಾಯಕ ಹಾಗೂ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕಲು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ ಎಂದು ತಿಳಿದುಬಂದಿದೆ. ಇದರ ಜತೆಗೆ, ಅಜರುದ್ದೀನ್ ಹೆಸರಿನೊಂದಿಗೆ ಇನ್ನು ಮುಂದೆ ಟಿಕೆಟ್‌ಗಳನ್ನು ನೀಡದಂತೆ HCA ಗೆ ಆದೇಶಿಸಲಾಗಿದೆ.

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನ ನೈತಿಕ ಅಧಿಕಾರಿ ಮತ್ತು ನ್ಯಾಯಮೂರ್ತಿ ವಿ. ಈಶ್ವರಯ್ಯ ಅವರು ಶನಿವಾರ ಈ ಆದೇಶವನ್ನು ಅಂಗೀಕರಿಸಿದ್ದಾರೆ. ಸ್ಟೇಡಿಯಂನ ​​ಉತ್ತರ ಪೆವಿಲಿಯನ್ ಸ್ಟ್ಯಾಂಡ್‌ನಲ್ಲಿ ಅಜರುದ್ದೀನ್ ಅವರ ಹೆಸರು ಇದೆ.

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಹಿತಾಸಕ್ತಿ ಸಂಘರ್ಷದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಅಜರುದ್ದೀನ್ ಅವರಿಗೆ 2019 ರಲ್ಲಿ ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷರಾಗಿದ್ದರು ಮತ್ತು ಅದೇ ವರ್ಷ ನಡೆದ ಉನ್ನತ ಸಭೆಯಲ್ಲಿ, ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಉತ್ತರ ಪೆವಿಲಿಯನ್ ಸ್ಟ್ಯಾಂಡ್‌ನಿಂದ ವಿವಿಎಸ್ ಲಕ್ಷ್ಮಣ್ ಅವರ ಹೆಸರನ್ನು ತೆಗೆದು ಮರುನಾಮಕರಣ ಮಾಡಿ ಅಜರುದ್ದೀನ್ ಹೆಸರನ್ನು ಇಡಲಾಗಿತ್ತು. ಇದೀಗ ಅಜರುದ್ದೀನ್ ಹೆಸರನ್ನು ತೆಗೆದು ಮತ್ತೆ ಲಕ್ಷಣ್‌ ಅವರ ಹೆಸರನ್ನು ಇಡುವಂತೆ ನಿರ್ಧರಿಸಲಾಗಿದೆ.

ಇದನ್ನೂ ಓದಿ IPL 2025: ಗೆಲುವಿನ ಸಂತಸದಲ್ಲಿದ್ದ ನಾಯಕ ಗಿಲ್‌ಗೆ 12 ಲಕ್ಷ ದಂಡದ ಬರೆ

ಅಜರುದ್ದೀನ್ ಅವರು 2019 ರಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA) ಅಧ್ಯಕ್ಷರಾಗಿದ್ದ ವೇಳೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ಹಣಕಾಸಿನ ಅಕ್ರಮ ಎಸಗಿದ್ದರು. ಖಾಸಗಿ ಕಂಪನಿಗಳಿಗೆ ಹೆಚ್ಚಿನ ದರದಲ್ಲಿ ಗುತ್ತಿಗೆ ನೀಡಿ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದರು. ಒಟ್ಟು 20 ಕೋಟಿ ಅವ್ಯವಹಾರ ನಡೆಸಿದ್ದರು ಎಂದು ಹೇಳಲಾಗಿತ್ತು. ಇದೇ ಕಾರಣಕ್ಕೆ ಅವರ ವಿರುದ್ಧ ಇಡಿ ಪ್ರಕರಣ ದಾಖಲು ಮಾಡಿಕೊಂಡಿತ್ತು.