ಭಾರತದಿಂದ ಟಿ20 ವಿಶ್ವಕಪ್ ಪಂದ್ಯ ಸ್ಥಳಾಂತರಿಸುವ ಬಾಂಗ್ಲಾದ ಮನವಿ ತಿರಸ್ಕರಿಸಿದ ಐಸಿಸಿ
T20 World Cup: ಭಾರತಕ್ಕೆ ತಿರುಗೇಟು ನೀಡುವ ಸಲುವಾಗಿ ಬಾಂಗ್ಲಾದೇಶವು ಮುಂಬರುವ ಐಪಿಎಲ್ ಋತುವಿನ ಪ್ರಸಾರವನ್ನು ದೇಶದಲ್ಲಿ ನಿಷೇಧಿಸುವ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೂ ಮೊದಲು ಇಂಡಿಯಾ ಟುಡೇ ಜತೆ ಮಾತನಾಡಿದ ಫಾರೂಕ್ ಅಹ್ಮದ್, ಎರಡು ಕ್ರಿಕೆಟ್ ಮಂಡಳಿಗಳ ನಡುವಿನ ಸಂಬಂಧವನ್ನು ಹದಗೆಡಿಸುವಲ್ಲಿ ರಾಜಕೀಯವು ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದರು
Bangladesh team -
ದುಬೈ, ಜ.7: ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್(T20 World Cup) ಪಂದ್ಯಗಳನ್ನು ಭಾರತದಿಂದ ಹೊರಗೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(Bangladesh Cricket Board)ಯ ಮನವಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಎರಡೂ ಸಂಸ್ಥೆಗಳ ನಡುವಿನ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ತಿಳಿಸಲಾಗಿದೆ. ಬಾಂಗ್ಲಾದೇಶ ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕಾಗುತ್ತದೆ ಅಥವಾ ಅಂಕಗಳನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ.
ಬಾಂಗ್ಲಾ ವೇಗಿ ಮುಸ್ತಾಫಿಜುರ್ ರಹಮಾನ್‌ರನ್ನು ಮುಂಬರುವ ಐಪಿಎಲ್‌ನಿಂದ ಹೊರಹಾಕಿದ್ದಕ್ಕೆ ಭಾರತ ವಿರುದ್ಧ ಆಕ್ರೋಶಗೊಂಡಿರುವ ಬಾಂಗ್ಲಾ, ಸುರಕ್ಷತೆ ಮತ್ತು ಭದ್ರತೆಯ ಕಾರಣ ನೀಡಿ ವಿಶ್ವಕಪ್ ಪಂದ್ಯಾವಳಿ ಆಡಲು ಭಾರತಕ್ಕೆ ಪ್ರಯಾಣಿಸುವುದಿಲ್ಲ ಮತ್ತು ತನ್ನ ಪಂದ್ಯಗಳನ್ನು ವಿಶ್ವಕಪ್‌ಗೆ ಜಂಟಿ ಆತಿಥ್ಯ ವಹಿಸಿಕೊಂಡಿರುವ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಕಳೆದ ಭಾನುವಾರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ (ಐಸಿಸಿ) ಬಿಸಿಬಿ ಮನವಿ ಸಲ್ಲಿಸಿತ್ತು. ಆದರೆ ಬಾಂಗ್ಲಾದ ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ, ಟೂರ್ನಮೆಂಟ್ ವೇಳಾಪಟ್ಟಿ ಮತ್ತು ಸ್ಥಳಗಳು ಯಾವುದೇ ಕಳವಳಗಳನ್ನು ವ್ಯಕ್ತಪಡಿಸಿದ್ದರೂ ಬದಲಾಗದೆ ಉಳಿಯುತ್ತವೆ ಎಂದು ತಿಳಿಸಿದೆ. ಭಾರತದಲ್ಲಿ ಪಂದ್ಯಗಳನ್ನು ಆಡಲು ನಿರಾಕರಿಸುವುದರಿಂದ ಅಂಕಗಳನ್ನು ಕಳೆದುಕೊಳ್ಳುವ ಸಾಧ್ಯತೆ ಸೇರಿದಂತೆ ಕ್ರೀಡಾ ಪರಿಣಾಮಗಳು ಉಂಟಾಗುತ್ತವೆ ಎಂದು ಜಾಗತಿಕ ಸಂಸ್ಥೆ ಬಿಸಿಬಿಗೆ ತಿಳಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ನಿರಾಕರಣೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ಸಂವಹನವನ್ನು ಅವರು ಇನ್ನೂ ಸ್ವೀಕರಿಸಿಲ್ಲ ಎಂದು ಬಿಸಿಬಿ ಮೂಲಗಳು ಸಮರ್ಥಿಸಿಕೊಂಡಿವೆ.
Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ನರಮೇಧ, 18 ದಿನಗಳಲ್ಲಿ 6ನೇ ಬಲಿ
ಭಾರತಕ್ಕೆ ತಿರುಗೇಟು ನೀಡುವ ಸಲುವಾಗಿ ಬಾಂಗ್ಲಾದೇಶವು ಮುಂಬರುವ ಐಪಿಎಲ್ ಋತುವಿನ ಪ್ರಸಾರವನ್ನು ದೇಶದಲ್ಲಿ ನಿಷೇಧಿಸುವ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೂ ಮೊದಲು ಇಂಡಿಯಾ ಟುಡೇ ಜತೆ ಮಾತನಾಡಿದ ಫಾರೂಕ್ ಅಹ್ಮದ್, ಎರಡು ಕ್ರಿಕೆಟ್ ಮಂಡಳಿಗಳ ನಡುವಿನ ಸಂಬಂಧವನ್ನು ಹದಗೆಡಿಸುವಲ್ಲಿ ರಾಜಕೀಯವು ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದರು. ಕ್ರಿಕೆಟ್ ವಿಷಯಗಳು ವ್ಯಾಪಕ ಸಮಸ್ಯೆಗಳೊಂದಿಗೆ ಸಿಲುಕಿಕೊಂಡಿವೆ ಎಂದು ಒತ್ತಿ ಹೇಳಿದ್ದರು.
ಹಿಂದೂ ಪರ ಸಂಘಟನೆಗಳು, ಸ್ವಾಮೀಜಿಗಳು, ಬಿಜೆಪಿ ಮುಖಂಡರು ಸೇರಿ ಹಲವರು, ಬಾಂಗ್ಲಾದಲ್ಲಿ ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದರೂ ಆ ದೇಶದ ವೇಗಿಗೆ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ, ಬಿಸಿಸಿಐ ಮುಸ್ತಾಫಿಜುರ್‌ರನ್ನು ಐಪಿಎಲ್‌ನಿಂದ ಹೊರಹಾಕಿಸಿತ್ತು.