ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿ ದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ಬಳಿಕ ಫಾರ್ಮ್ ಕಂಡುಕೊಂಡ ಸ್ಮಿತ್ ಎರಡನೇ ಸ್ಥಾನವನ್ನು ಉಳಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಶ್ರೇಯಾಂಕ ಪಟ್ಟಿಯಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಬ್ಯಾಟ್ಸ್‌ಮನ್, ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್. ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಪಂತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 13ನೇ ಸ್ಥಾನಕ್ಕೇರಿದ್ದಾರೆ.