Wednesday, 11th December 2024

ICC Test Rankings: ಜೋ ರೂಟ್‌ರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಹ್ಯಾರಿ ಬ್ರೂಕ್‌!

Harry Brooks replaces Root as No. 1 batter; Bumrah, Jadeja top bowlers and all-rounders list

ನವದೆಹಲಿ: ನ್ಯೂಜಿಲೆಂಡ್‌ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಇಂಗ್ಲೆಂಡ್‌ ತಂಡದ ಬ್ಯಾಟ್ಸ್‌ಮನ್‌ ಹ್ಯಾರಿ ಬ್ರೂಕ್‌ ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ (ICC Test rankings) ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಆ ಮೂಲಕ ದೀರ್ಘಾವಧಿ ಬಳಿಕ ಇಂಗ್ಲೆಂಡ್‌ ಮಾಜಿ ನಾಯಕ ಜೋ ರೂಟ್‌ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಟೆಸ್ಟ್‌ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದರೆ, ಭಾರತದ ರವೀಂದ್ರ ಜಡೇಜಾ ಟೆಸ್ಟ್‌ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬೌಲಿಂಗ್‌ ಹಾಗೂ ಆಲ್‌ರೌಂಡ್‌ ಶ್ರೇಯಾಂಕದಲ್ಲಿ ಭಾರತೀಯ ಆಟಗಾರರ ಪ್ರಾಬಲ್ಯ ಸಾಧಿಸಿದ್ದಾರೆ.

ಕಳೆದ ವಾರ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯದಲ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದ ಎಂಟನೇ ಶತಕ ಸಿಡಿಸಿದ್ದ 25ನೇ ವಯಸ್ಸಿನ ಹ್ಯಾರಿ ಬ್ರೂಕ್‌ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದ ಅಗ್ರ ಸ್ಥಾನದಲ್ಲಿದ್ದ ಜೋ ರೂಟ್‌ ಅವರನ್ನು ಹಿಂದಿಕ್ಕಿದ್ದಾರೆ. ಜೂ ರೂಟ್‌ಗಿಣದ ಒಂದು ಅಂಕ ಹೆಚ್ಚು ಹೊಂದಿರುವುದರ ಲಾಭ ಪಡೆದ ಹ್ಯಾರಿ ಬ್ರೂಕ್‌ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಹ್ಯಾರಿ ಬ್ರೂಕ್‌ ಇದೀಗ ತಮ್ಮ ಖಾತೆಯಲ್ಲಿ 898 ಅಂಕಗಳನ್ನು ಹೊಂದಿದ್ದರೆ, ಜೋ ರೂಟ್‌ 897 ಅಂಕಗಳನ್ನು ಹೊಂದಿದ್ದಾರೆ. ಟೆಸ್ಟ್‌ ಬ್ಯಾಟಿಂಗ್‌ ಶ್ರೇಯಾಂಕದ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್‌ ಪಡೆದ 34ನೇ ಬ್ಯಾಟ್ಸ್‌ಮನ್‌ ಆಗಿ ಸಚಿನ್‌ ತೆಂಡೂಲ್ಕರ್‌ ಅವರ ಜತೆ ಸೇರ್ಪಡೆಯಾಗಿದ್ದಾರೆ. ಕಳೆದ ಜುಲೈನಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ ಕೇನ್‌ ವಿಲಿಯಮ್ಸನ್‌ ಅವರನ್ನು ಹಿಂದಿಕ್ಕಿ ಜೂ ರೂಟ್‌ ಅಗ್ರಸ್ಥಾನವನ್ನು ಅಲಂಕರಿಸಿದ್ದರು.

ನ್ಯೂಜಿಲೆಂಡ್‌ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಹ್ಯಾರಿ ಬ್ರೂಕ್‌ ಅವರು ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 123 ಮತ್ತು 55 ರನ್‌ಗಳನ್ನು
ಕಲೆಹಾಕಿದ್ದಾರೆ. ಆ ಮೂಲಕ ಇಂಗ್ಲೆಂಡ್‌ ತಂಡ 323 ರನ್‌ಗಳ ಗೆಲುವು ಪಡೆದಿತ್ತು. ಇದೇ ಪಂದ್ಯದಲ್ಲಿ ಜೋ ರೂಟ್‌ ಕೂಡ 106 ರನ್‌ಗಳನ್ನುಗಳಿಸಿದ್ದಾರೆ.

ಅಗ್ರ ಸ್ಥಾನದಲ್ಲಿ ಉಳಿದ ಜಸ್‌ಪ್ರೀತ್‌ ಬುಮ್ರಾ

ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಅವರು 890 ಅಂಕಗಳನ್ನು ಕಲೆಹಾಕಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ತಂಡದ ಹಿರಿಯ ವೇಗಿ ಜಾಕ್‌ ಕಾಲಿಸ್‌ ಅವರು 856 ಅಂಕಗಳ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, ಜಾಶ ಹೇಝಲ್‌ವುಡ್‌ ಮೂರನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜಾಗೆ ಅಗ್ರ ಸ್ಥಾನ

415 ಅಂಕಗಳನ್ನು ಹೊಂದಿರುವ ರವೀಂದ್ರ ಜಡೇಜಾ ಅವರು ಟೆಸ್ಟ್‌ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇವರ ಬಳಿಕ ಬಾಂಗ್ಲಾದೇಶ ತಂಡದ ಆಲ್‌ರೌಂಡರ್‌ ಮೆಹಿಡಿ ಮಿರಾಜ್‌ ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್‌ ಇಂಡೀಸ್‌ ವಿರುದ್ದ ಟೆಸ್ಟ್‌ ಸರಣಿಯಲ್ಲಿ ಮೆಹಡಿ ಮಿರಾಜ್‌ ಉತ್ತಮ ಪ್ರದರ್ಶನವನ್ನು ತೋರಿದ್ದರು.

ಈ ಸುದ್ದಿಯನ್ನು ಓದಿ: IND vs AUS: ರೋಹಿತ್‌ ಶರ್ಮಾ ವೈಫಲ್ಯಕ್ಕೆ ಕಾರಣ ತಿಳಿಸಿದ ಸುನೀಲ್‌ ಗವಾಸ್ಕರ್‌!