#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ 2ನೇ ಬಾರಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ ಗೆದ್ದ ಭಾರತ!

India Clinch U19 women's T20 World Cup: ಫೈನಲ್‌ ಹಣಾಹಣಿಯಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ, ಐಸಿಸಿ ಅಂಡರ್‌-19 ಮಹಿಳಾ ವಿಶ್ವಕಪ್‌ ಮುಡಿಗೇರಿಸಿಕೊಂಡಿತು. ಇದು ಭಾರತದ ಪಾಲಿಗೆ ಸತತ ಎರಡನೇ ಟಿ20 ವಿಶ್ವಕಪ್‌ ಆಗಿದೆ. ಈ ಹಿಂದೆ ಶಫಾಲಿ ವರ್ಮಾ ನಾಯಕತ್ವದಲ್ಲಿ ಭಾರತ, ಅಂಡರ್‌19 ಮಹಿಳಾ ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತ್ತು.

ಸತತ ಎರಡನೇ ಬಾರಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ ಗೆದ್ದ ಭಾರತ!

India Clinch U19 women's T20 World Cup

Profile Ramesh Kote Feb 2, 2025 3:53 PM

ಕೌಲಾಲಂಪುರ: ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿದ ಭಾರತ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಭಾರತ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿಯನ್ನು ತಲುಪಿತು.

ಇದು ಈ ಟೂರ್ನಿಯಲ್ಲಿ ಭಾರತ ತಂಡದ ಸತತ ಆರನೇ ಗೆಲುವು. ಇದಕ್ಕೂ ಮುನ್ನ ಭಾರತ ತಂಡ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತ್ತು. 2023ರಲ್ಲಿ ಶಫಾಲಿ ವರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಈ ಟ್ರೋಫಿಯನ್ನು ಗೆದ್ದುಕೊಂಡಿತ್ತು.

Under-19 Women's Asia Cup: ಬಾಂಗ್ಲಾದೇಶ ವಿರುದ್ಧ ಗೆದ್ದು ಅಂಡರ್‌-19 ಮಹಿಳಾ ಏಷ್ಯಾ ಕಪ್‌ ಮುಡಿಗೇರಿಸಿಕೊಂಡ ಭಾರತ!

ಮಹಿಳಾ ಅಂಡರ್ 19 ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನವನ್ನು ತೋರಿದರು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು. ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಲು ಟೀಮ್ ಇಂಡಿಯಾಗೆ ಕೇವಲ 83 ರನ್‌ಗಳ ಅಗತ್ಯವಿತ್ತು.



ಅದರಂತೆ ಈ ಗುರಿಯನ್ನು ಟೀಮ್‌ ಇಂಡಿಯಾ ಸುಲಭವಾಗಿ ಚೇಸ್‌ ಮಾಡಿತು. ಭಾರತದ ಪರ ಜಿ. ತ್ರಿಷಾ ಗರಿಷ್ಠ ಮೂರು ವಿಕೆಟ್ ಪಡೆದರು. ವೈಷ್ಣವಿ, ಆಯುಷಿ ಮತ್ತು ಪರುಣಿಕಾ ಸಿಸೋಡಿಯಾ ತಲಾ ಎರಡೆರಡು ವಿಕೆಟ್‌ಗಳನ್ನು ಪಡೆದರು. ಶಬ್ನಮ್ ಶಕೀಲ್ ಒಂದು ವಿಕೆಟ್ ಪಡೆದರು.



ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ ಹಣಾಹಣಿಯಲ್ಲಿ ಬೌಲರ್‌ಗಳ ಅದ್ಭುತ ಪ್ರದರ್ಶನದ ನಂತರ, ಭಾರತೀಯ ಬ್ಯಾಟ್ಸ್‌ಮನ್‌ಗಳು ಕೂಡ ಮಿಂಚಿನ ಪ್ರದರ್ಶನವನ್ನು ತೋರಿದ್ದರು. 82 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ಕೇವಲ ಒಂದು ವಿಕೆಟ್ ಕಳೆದುಕೊಂಡಿತು. ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಜಿ ಕಾಮಿನಿ ಕೇವಲ 8 ರನ್ ಗಳಿಸಿ ಔಟಾದರು. ಆದಾಗ್ಯೂ, ಮತ್ತೊರ್ವ ಆರಂಭಿಕ ಆಟಗಾರ್ತಿ ಮತ್ತು ಟೂರ್ನಿಯ ಅತಿ ಹೆಚ್ಚು ರನ್ ಗಳಿಸಿದ ಜಿ ತ್ರಿಷಾ 33 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಸನಿಕಾ ಚಾಲ್ಕೆ 22 ಎಸೆತಗಳಲ್ಲಿ 26 ರನ್ ಗಳಿಸಿ ಅಜೇಯರಾಗುಳಿದರು.