ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

M.Chinnaswamy Stadium: ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ ನಡೆಸಲು 17 ಷರತ್ತು!

ಕೆಲ ದಿನಗಳ ಹಿಂದೆ ಪೊಲೀಸ್‌ ಇಲಾಖೆ ಕ್ರೀಡಾಂಗಣದ ಪರಿಶೀಲನೆ ನಡೆಸಿದ್ದು, ಹಲವು ಲೋಪಗಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಕೆಎಸ್‌ಸಿಎಗೆ ಪತ್ರ ಬರೆದಿರುವ ಇಲಾಖೆ, ಪಾರ್ಕಿಂಗ್‌, ವೈದ್ಯಕೀಯ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿ, ಅದಕ್ಕೆ 15 ಇನಗಳ ಗಡುವು ನೀಡಿದೆ ಎಂದು ತಿಳಿದು ಬಂದಿದೆ.

ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ ನಡೆಸಲು 17 ಷರತ್ತು!

Abhilash BC Abhilash BC Aug 22, 2025 11:45 AM

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M. Chinnaswamy Stadium) ಐಸಿಸಿ ಮಹಿಳಾ ವಿಶ್ವಕಪ್(ICC Women's Cricket World Cup) ಪಂದ್ಯಗಳನ್ನು ಆಯೋಜಿಸುವ ಆಕಾಂಕ್ಷೆಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಕ್ರೀಡಾಂಗಣವನ್ನು ಮರುಮೌಲ್ಯಮಾಪನ ಮಾಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಯೋಗ್ಯವೆಂದು ಘೋಷಿಸುವ ಮೊದಲು 17 ಷರತ್ತುಗಳನ್ನು ಪಾಲಿಸಿ ಎಂದು ರಾಜ್ಯ ಪೊಲೀಸ್ ಇಲಾಖೆ ಸೂಚಿಸಿದೆ.

ಜೂನ್‌ನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಇಲ್ಲಿ ಯಾವುದೇ ಕ್ರಿಕೆಟ್‌ ಪಂದ್ಯ ನಡೆಯುತ್ತಿಲ್ಲ. ಇತ್ತೀಚೆಗೆ ಇದರ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ನ್ಯಾ.ಕುನ್ಹಾ ಆಯೋಗ, ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಲೀಗ್‌ ಆಯೋಜನೆಗೆ ಅಗತ್ಯವಿರುವ ಅನುಮತಿಯನ್ನು ಪೊಲೀಸ್‌ ಇಲಾಖೆ ನಿರಾಕರಿಸುತ್ತಿದೆ.

ಕೆಲ ದಿನಗಳ ಹಿಂದೆ ಪೊಲೀಸ್‌ ಇಲಾಖೆ ಕ್ರೀಡಾಂಗಣದ ಪರಿಶೀಲನೆ ನಡೆಸಿದ್ದು, ಹಲವು ಲೋಪಗಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಕೆಎಸ್‌ಸಿಎಗೆ ಪತ್ರ ಬರೆದಿರುವ ಇಲಾಖೆ, ಪಾರ್ಕಿಂಗ್‌, ವೈದ್ಯಕೀಯ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿ, ಅದಕ್ಕೆ 15 ಇನಗಳ ಗಡುವು ನೀಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ ಚಿನ್ನಸ್ವಾಮಿಯಿಂದ ಮಹಿಳಾ ವಿಶ್ವಕಪ್‌ ಟೂರ್ನಿ ಶಿಫ್ಟ್; ಈ ವಾರ ಅಂತಿಮ ನಿರ್ಧಾರ

ಷರತ್ತು ಪಟ್ಟಿ ಹೀಗಿದೆ

  1. ಪಾರ್ಕಿಂಗ್ ಸೌಲಭ್ಯಗಳನ್ನು ಒದಗಿಸಬೇಕು.
  2. ವೀಕ್ಷಕರಿಗೆ ಪ್ರತ್ಯೇಕ ಮಾರ್ಗಗಳು.
  3. ಎಲ್ಲಾ ದ್ವಾರಗಳಲ್ಲಿ ಬ್ಯಾಗ್ ಸ್ಕ್ಯಾನರ್‌ಗಳನ್ನು ಅಳವಡಿಕೆ.
  4. ಕ್ರೀಡಾಂಗಣದ ಪಾಲುದಾರರು ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು ಪಡೆಯಬೇಕು.
  5. ಮಹಿಳೆಯರು ಮತ್ತು ಮಕ್ಕಳಿಗೆ ಪ್ರತ್ಯೇಕ ಪ್ರವೇಶ.
  6. ಶಾಶ್ವತ ವೈದ್ಯಕೀಯ ಸೌಲಭ್ಯಗಳು.
  7. ಅಗ್ನಿಶಾಮಕ ಉಪಕರಣಗಳು, ವಿದ್ಯುತ್ ಉಪಕರಣಗಳು ಮತ್ತು ಸಂಪರ್ಕಗಳ ಲೆಕ್ಕಪರಿಶೋಧನೆ.
  8. ಆಟಗಾರರಿಗೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರ.
  9. ಪ್ರೇಕ್ಷಕರ ಮೇಲೆ ನಿಗಾ ಇಡಲು ವಿಶೇಷ ತಂತ್ರಜ್ಞಾನ ಬಳಕೆ.
  10. ಕ್ರೀಡಾಂಗಣದ ಗೇಟ್‌ಗಳ ಗಾತ್ರ ಹೆಚ್ಚಳ.
  11. ಕ್ರೀಡಾಂಗಣದ ಬಳಿ ಜನಸಂದಣಿ ತಪ್ಪಿಸಲು ಪಿಕಪ್‌ ಮತ್ತು ಡ್ರಾಪ್‌ ಪಾಯಿಂಟ್‌ ನಿರ್ಮಿಸಬೇಕು.