Monday, 14th October 2024

ಅಕ್ಟೋಬರ್‌ 5 ರಿಂದ ಐಸಿಸಿ ವಿಶ್ವಕಪ್ 2023 ಆರಂಭ

ಮುಂಬೈ: ಐಸಿಸಿ ವಿಶ್ವಕಪ್ 2023 ರ ವೇಳಾಪಟ್ಟಿ ಪ್ರಕಟವಾಗಿದ್ದು, ಟೂರ್ನಿ ಅಕ್ಟೋ ಬರ್‌ 5 ರಿಂದ ನವೆಂಬರ್‌ 19 ರವರೆಗೆ ನಡೆಯಲಿದೆ.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾ ಮುಖಿಯಾಗಲಿವೆ. 2023ರ ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 19 ರಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪ್ರಶಸ್ತಿ ಪಂದ್ಯವೂ ನಡೆಯಲಿದೆ.

ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ಈ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣ ದಲ್ಲಿ ನಡೆಯಲಿದೆ.

ಟೀಂ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯವನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಆಡಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.