Friday, 22nd November 2024

ಈ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲದಿದ್ದರೆ ಮೂರು ಆವೃತ್ತಿಗಳ ಪ್ರಶಸ್ತಿಗಾಗಿ ಕಾಯಬೇಕು: ರವಿಶಾಸ್ತ್ರಿ

ನವದೆಹಲಿ: ಈ ಆವೃತ್ತಿಯಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಇನ್ನೂ ಮುಂದಿನ ಮೂರು ವಿಶ್ವಕಪ್ ಆವೃತ್ತಿಗಳಲ್ಲಿ ಪ್ರಶಸ್ತಿಗಾಗಿ ಕಾಯ ಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತಿಳಿಸಿದ್ದಾರೆ.

ಟೀಂ ಇಂಡಿಯಾದ ಬಹುತೇಕ ಆಟಗಾರರು ಇದೀಗ ಫಾರ್ಮ್ ನಲ್ಲಿದ್ದಾರೆ. ಈ ಬಾರಿ ಐಸಿಸಿ ಪ್ರಶಸ್ತಿಯ ಬರವನ್ನು ಕೊನೆಗೊಳಿಸಲು ಉತ್ತಮ ಅವಕಾಶ ಸಿಕ್ಕಿದೆ ಎಂದು ಹೇಳಿದರು. ಭಾರತ 12 ವರ್ಷಗಳ ಹಿಂದೆ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

ಇದೀಗ ಮತ್ತೊಮ್ಮೆ ಟೀಂ ಇಂಡಿಯಾಗೆ ಪ್ರಶಸ್ತಿ ಗೆಲ್ಲುವ ಅವಕಾಶವಿದೆ. ಟೀಂ ಇಂಡಿಯಾ ಸದ್ಯ ಆಡುತ್ತಿರುವ ರೀತಿಯನ್ನು ಗಮನಿಸಿದರೆ, ಇದು ಬಹುಶಃ ಅತ್ಯುತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು.

‘ಸದ್ಯ ಉತ್ತಮವಾಗಿ ಆಡುತ್ತಿರುವ ಭಾರತದ ತಂಡವು, ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಇದು ಕೊನೆಯ ಅವಕಾಶ ಆಗಿರಬಹುದು. ಜಸ್ಪ್ರೀತ್ ಬುಮ್ರಾ, ಮೊಹ ಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಮಿಂಚುತ್ತಿದ್ದಾರೆ. ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಅವರ ಸ್ಪಿನ್ ಸಂಯೋಜನೆ ಕೂಡ ಮಧ್ಯಮ ಓವರ್ಗಳಲ್ಲಿ ಉತ್ತಮವಾಗಿ ಮೂಡಿಬಂದಿದೆ’ ಎಂದು ರವಿಶಾಸ್ತ್ರಿ ಹೇಳಿದರು.