ಚೆನ್ನೈ, ಜೂ.20: ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ(India's Odi record at Chennai)ದಲ್ಲಿ ಈ ಪಂದ್ಯ ನಡೆಯುತ್ತಿದೆ. ಭಾರತ ಈ ಪಂದ್ಯಕ್ಕೆ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿಯಿತು. ಮೊದಲ ಪಂದ್ಯವಾಡಿದ್ದ ಹರ್ಷ್ ದುಬೆ, ಪ್ರಸಿದ್ಧ್ ಕೃಷ್ಣ ಮತ್ತು ನಿತೀಶ್ ಕುಮಾರ್ ರೆಡ್ಡಿ ಮತ್ತೆ ಆಡುವ ಬಳಗ ಸೇರಿದರು. ಕೆ.ಎಲ್ ರಾಹುಲ್, ಅರ್ಶ್‌ದೀಪ್ ಸಿಂಗ್ ಮತ್ತು ಕುಲ್‌ದೀಪ್ ಯಾದವ್ ಅವರನ್ನು ಕೈಬಿಡಲಾಯಿತು. ವೇಗಿ ಹರ್ಷಿತ್ ರಾಣಾ ತಂಡ ಸೇರಿದರೂ ಆಡುವ ಬಳಗದಲ್ಲಿ ಅವಕಾಶ ಪಡೆಯಲಿಲ್ಲ.
ಮೂರು ವರ್ಷದ ಬಳಿಕ ಪಂದ್ಯ
ಭಾರತ ಇಲ್ಲಿ ಮೂರು ವರ್ಷದ ಬಳಿಕ ಆಡುತ್ತಿರುವ ಏಕದಿನ ಪಂದ್ಯ ಇದಾಗಿದೆ. ಇಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದು 2023ರ ವಿಶ್ವಕಪ್‌ನಲ್ಲಿ. ಆಸ್ಟ್ರೇಲಿಯಾ ವಿರುದ್ಧದ ಲೀಗ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ಅಜೇಯ 97 ರನ್‌ಗಳ ನೆರವಿನಿಂದ ಭಾರತ ಗೆಲುವು ಸಾಧಿಸಿತ್ತು. ಆದರೆ ಇಂದಿನ ಪಂದ್ಯಕ್ಕೆ ರಾಹುಲ್‌ಗೆ ವಿಶ್ರಾಂತಿ ನೀಡಲಾಗಿದೆ.
ರೋಹಿತ್ ಶರ್ಮಾ ಈ ಕ್ರೀಡಾಂಗಣದಲ್ಲಿ ಕಳಪೆ ದಾಖಲೆಯನ್ನು ಹೊಂದಿದ್ದಾರೆ. ಇಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಅವರು 20.00 ಸರಾಸರಿಯಲ್ಲಿ ಕೇವಲ 140 ರನ್ ಗಳಿಸಿದ್ದಾರೆ. ಚೆನ್ನೈನಲ್ಲಿ ಅಫ್ಘಾನಿಸ್ತಾನದ ಪರ ರಹಮತ್ ಶಾ ಅತಿ ಹೆಚ್ಚು ರನ್ ಗಳಿಸಿದ್ದಾರೆ.
ಉಭಯ ಆಡುವ ಬಳಗ
ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭಮನ್ ಗಿಲ್(ನಾಯಕ), ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್.
ಮೆಸ್ಸಿ, ಅರ್ಜೆಂಟೀನಾ ವಿರುದ್ಧ ದೂರು ದಾಖಲಿಸಿದ ಅಲ್ಜೀರಿಯಾ
ಅಫ್ಘಾನಿಸ್ತಾನ; ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ದರ್ವಿಶ್ ರಸೂಲಿ, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಎಎಮ್ ಗಜನ್ಫರ್, ಜಿಯಾ ಉರ್ ರಹಮಾನ್ ಷರೀಫಿ, ಫರೀದ್ ಅಹ್ಮದ್ ಮಲಿಕ್.