ಚೆನ್ನೈ, ಜೂ. 20: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ(IND vs AFG 3rd Odi) ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಉ ಮಧ್ಯಾಹ್ನ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿದ್ದು, ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿವೆ. ಈ ಪಂದ್ಯಕ್ಕೆ ಮಳೆ ಭೀತಿ(IND vs AFG weather report) ಇದೆಯೇ? ಎಂಬ ವರದಿ ಇಲ್ಲಿದೆ.
ಭಾರತ ತಂಡವು ಈಗಾಗಲೇ ಎರಡು ಗೆಲುವು ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದ್ದರೂ, ತಂಡವು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಧರ್ಮಶಾಲಾದಲ್ಲಿ ಭರ್ಜರಿ ಜಯ ಸಾಧಿಸಿದ ಭಾರತ, ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ 170 ರನ್‌ಗಳ ಭರ್ಜರಿ ಜಯ ಸಾಧಿಸಿತು. ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ತಮ್ಮ ಶತಕಗಳನ್ನು ಗಳಿಸುವ ಮೂಲಕ ಭಾರತವನ್ನು ಅಂತಿಮ ಗೆಲುವಿನತ್ತ ಕೊಂಡೊಯ್ದರು.
ಈಗಾಗಲೇ ಸರಣಿಯನ್ನು ಕಳೆದುಕೊಂಡಿರುವ ಅಫ್ಘಾನಿಸ್ತಾನ ತಂಡ ಸಮಾಧಾನಕರ ಗೆಲುವು ದಾಖಲಿಸುವ ಗುರಿಯನ್ನು ಹೊಂದಿದ್ದು, ಇಂದು ಚೆನ್ನೈನಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ. ಫಾರ್ಮ್‌ನಲ್ಲಿರುವ ಭಾರತದ ವಿರುದ್ಧ ಅವರು ಹೇಗೆ ಆಡುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.
ಭಾರೀ ಮಳೆ ಸಾಧ್ಯತೆ
ಅಕ್ಯೂವೆದರ್ ಪ್ರಕಾರ, ಪಂದ್ಯದ ಆರಂಭದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಟ್ಟ ಹವಾಮಾನವು ಮಧ್ಯಾಹ್ನ 3-4 ಗಂಟೆಯವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಪಂದ್ಯದ ಆರಂಭಿಕ ಹಂತಗಳಲ್ಲಿ ಮಳೆಯಾಗುವ ಸಾಧ್ಯತೆ ಸ್ವಲ್ಪ ಇರಲಿದೆ.
FIFA World Cup 2026: ಗೆಲುವಿನ ಖಾತೆ ತೆರೆದ ಬ್ರೆಜಿಲ್, ನಾಕೌಟ್‌ಗೆ ಲಗ್ಗೆಯಿಟ್ಟ ಅಮೆರಿಕ
ಚೆನ್ನೈನಲ್ಲಿರುವ ಎಂ.ಎ. ಚಿದಂಬರಂ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿಯಾಗಿತ್ತು ಮತ್ತು ಮೊದಲು ಬ್ಯಾಟಿಂಗ್ ನಡೆಸಿದ ತಂಡಕ್ಕೆ ನೆರವು ನೀಡುತ್ತಿತ್ತು. ಆದರೆ ನವೀಕರಣಗೊಂಡ ಬಳಿಕ ಇಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾದ ಕಾರಣ ಪಿಚ್ ಹೇಗೆ ವರ್ತಿಸಲಿದೆ ಎನ್ನುದು ಕಾದು ನೋಡಬೇಕಿದೆ.
ಸಂಭಾವ್ಯ ತಂಡಗಳು
ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿ.ಕೀ.), ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ/ ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ಸೇದಿಕ್ ಅಟಲ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತ್ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ಜಿಯಾವುರ್ ರೆಹಮಾನ್, ಮೊಹಮ್ಮದ್ ಸಲೀಮ್.