ಪರ್ತ್: ಭಾರತೀಯ ಕ್ರಿಕೆಟ್‌ಗೆ ಮಾತ್ರವಲ್ಲ, ಜಾಗತಿಕ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ದಿಗ್ಗಜ. ತಮ್ಮ ಒಂದೂವರೆ ದಶಕದ ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಾರತ ತಂಡದ ಮಾಜಿ ನಾಯಕ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಅದರಂತೆ ಇತ್ತೀಚೆಗೆ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು ಹಾಗೂ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಆದೆರೆ, ಇದೀಗ ಆಸ್ಟ್ರೇಲಿಯಾ ವಿರುದ್ದದ ಮೊದಲನೇ ಟೆಸ್ಟ್ ಪಂದ್ಯದ (IND vs AUS) ದ್ವಿತೀಯ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿ ಫಾರ್ಮ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ ಹಾಗೂ ಟೀಕೆಗಳಿಗೆ ತಮ್ಮ ಬ್ಯಾಟ್‌ನಿಂದಲೇ ತಿರುಗೇಟು ನೀಡಿದ್ದಾರೆ.
ವಿರಾಟ್ ಕೊಹ್ಲಿ ಕೇವಲ ತಮ್ಮ ಅಂಕಿಅಂಶಗಳಿಗೆ ಮಾತ್ರವಲ್ಲ, ಕಠಿಣ ಪರಿಶ್ರಮ, ಉತ್ಸಾಹ ಹಾಗೂ ಮೈದಾನದಲ್ಲಿನ ಬುದ್ದಿವಂತಿಕೆಗೆ ಹೆಸರು ವಾಸಿ. ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವ ಅವರು, ಇಡೀ ಭಾರತದ ಕ್ರೀಡೆಗೆ ರಾಯಭಾರಿ ಇದ್ದಂತೆ. ಅವರ ಸಾಧನೆಗಳು ಭಾರತಕ್ಕೆ ಅಪಾರವಾದ ಹೆಮ್ಮೆ ತಂದಿದೆ ಮತ್ತು ನಿಸ್ಸಂಶಯವಾಗಿ ಅವರು ಈ ಪರಂಪರೆಗೆ ಸೇರಿಸಲು ಬಯಸುತ್ತಾರೆ.
IND vs AUS: ಜತೆಯಾಟದಲ್ಲಿ ದಾಖಲೆ ಬರೆದ ಜೈಸ್ವಾಲ್-ರಾಹುಲ್
ಆಸ್ಟ್ರೇಲಿಯಾ ಎದುರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ ಕೊಹ್ಲಿ
ಯಾವುದೇ ಸಂದರ್ಭದಲ್ಲಿ ತಮ್ಮ ವಿರುದ್ಧ ಪ್ರಶ್ನೆಗಳು ಎದುರಾದರೂ ವಿರಾಟ್ ಕೊಹ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಇದು ಸಾಬೀತಾಗಿದೆ. 2011ರಿಂದ ಇಲ್ಲಿಯವರೆಗೂ ಆಸ್ಟ್ರೇಲಿಯಾ ನೆಲದಲ್ಲಿ ಅತ್ಯಂತ ಹೆಚ್ಚಿನ ಟೆಸ್ಟ್ ಸರಾಸರಿಯನ್ನು ಹೊಂದಿರುವ ಬ್ಯಾಟ್ಸ್‌ಮನ್ ಇವರು. ಆ ಮೂಲಕ ಆಸ್ಟ್ರೇಲಿಯಾ ಪಿಚ್‌ಗಳು ಇವರಿಗೆ ಅತ್ಯಂತ ನೆಚ್ಚಿನ ಸ್ಥಳಗಳಾಗಿವೆ.
ಆಸ್ಟ್ರೇಲಿಯಾದಲ್ಲಿ ಕೊಹ್ಲಿ ಮುರಿದ ದಾಖಲೆಗಳು
ಪರ್ತ್ ಟೆಸ್ಟ್‌ನಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿನ ತಮ್ಮ ದಾಖಲೆಯನ್ನು ಇನ್ನಷ್ಟು ಉತ್ತಮಪಡಿಸಿಕೊಂಡಿದ್ದಾರೆ. ಇದೀಗ ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಇವರು ಎಲ್ಲಾ ಸ್ವರೂಪದಲ್ಲಿಯೂ 10 ಶತಕಗಳನ್ನು ಸಿಡಿಸಿದ್ದಾರೆ.
IND vs AUS: ಆಸ್ಟ್ರೇಲಿಯಾದಲ್ಲಿ ಏಳನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಫಾರ್ಮ್ ಕಳೆದುಕೊಂಡಿದ್ದ ಕೊಹ್ಲಿ
ವಿರಾಟ್ ಕೊಹ್ಲಿ ಕಳೆದ ವರ್ಷ ಜುಲೈನಲ್ಲಿ ಕೊನೆಯ ಶತಕವನ್ನು ಸಿಡಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಅವರು ಒಂದು ಶತಕ ಹಾಗೂ ಎರಡು ಅರ್ಧಶತಕಗಳನ್ನು ಮಾತ್ರ ಗಳಿಸಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಸತತ ವೈಫಲ್ಯ ಅನುಭವಿಸುವ ಮೂಲಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಔಟ್ ಫಾರ್ಮ್ ಮೂಲಕ ಪರ್ತ್ ಟೆಸ್ಟ್‌ಗೆ ಬಂದಿದ್ದ ಕೊಹ್ಲಿ, ಪ್ರಥಮ ಇನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು ಹಾಗೂ ಒಂದು ಸುಲಭ ಕ್ಯಾಚ್ ಅನ್ನು ಡ್ರಾಪ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ಅವರು ಶತಕ ಸಿಡಿಸುವ ಮೂಲಕ ಕಮ್‌ಬ್ಯಾಕ್ ಮಾಡಿದ್ದಾರೆ.
ನಿರ್ಣಾಯಕ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದ 30ನೇ ಶತಕ ಸಿಡಿಸಿದರು. ಆ ಮೂಲಕ ಮೂಲಕ ಭಾರತ ತಂಡ, ಎದುರಾಳಿ ತಂಡಕ್ಕೆ 533 ರನ್‌ಗಳ ಮುನ್ನಡೆ ಪಡೆಯಿತು ಹಾಗೂ ಎದುರಾಳಿ ಆಸ್ಟ್ರೇಲಿಯಾಗೆ 534 ರನ್‌ಗಳ ಗುರಿಯನ್ನು ನೀಡಿತ್ತು. ವಿರಾಟ್ ಕೊಹ್ಲಿ ಅವರ ಶತಕದ ಬಲದಿಂದ ಭಾರತ ತಂಡ ಪರ್ತ್ ಟೆಸ್ಟ್ ಮೇಲೆ ಹಿಡಿತವನ್ನು ಸಾಧಿಸಿದೆ.
Test Century No.30!
— BCCI (@BCCI) November 24, 2024
All hail, King Kohli 🫡👏👌
Live – https://t.co/gTqS3UPruo…… #AUSvIND pic.twitter.com/VkPr1YKYoR
ವಿರಾಟ್ ಕೊಹ್ಲಿ ಪಾಲಿಗೆ 81ನೇ ಶತಕ
ಪರ್ತ್‌ನಲ್ಲಿ ಮೂರಂಕಿ ವೈಯಕ್ತಿಕ ಮೊತ್ತವನ್ನು ಕಲೆ ಹಾಕುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 81ನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಅಂದ ಹಾಗೆ ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಪಾಲಿಗೆ 7ನೇ ಶತಕವಾಗಿದೆ. ಈ ಶತಕದ ಮೂಲಕ ವಿಶ್ವಾಸವನ್ನು ಹೆಚ್ಚಿಸಿಕೊಂಡಿರುವ ವಿರಾಟ್ ಕೊಹ್ಲಿ, ಮುಂದಿನ ಪಂದ್ಯಗಳಲ್ಲಿಯೂ ಶತಕ ಸಿಡಿಸುವ ವಿಶ್ವಾಸವನ್ನು ಹೊಂದಿದ್ದಾರೆ.