ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS 5th T20I: ಭಾರತ-ಆಸೀಸ್‌ ಅಂತಿಮ ಟಿ20 ಪಂದ್ಯ ಯಾವಾಗ?

ದಿ ಗಬ್ಬಾದಲ್ಲಿರುವ ಪಿಚ್ ವೇಗದ ಮತ್ತು ಬೌನ್ಸರ್‌ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಇದು ಬ್ಯಾಟ್ ಮತ್ತು ಚೆಂಡಿನ ನಡುವೆ ಉತ್ತಮ ಸಮತೋಲನವನ್ನು ನೀಡುತ್ತದೆ. ಈ ಮೈದಾನದಲ್ಲಿ ಮೊದಲು ನಡೆಸಿದ ತಂಡಗಳೇ ಹೆಚ್ಚು ಗೆದ್ದಿದೆ. ಶೇ.73ರಷ್ಟು ಗೆಲುವಿನ ದಾಖಲೆ ಹೊಂದಿದೆ. ಹೀಗಾಗಿ ಟಾಸ್‌ ಗೆದ್ದ ತಂಡ ಬ್ಯಾಟಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಅಧಿಕ.

ಭಾರತ-ಆಸೀಸ್‌ ಅಂತಿಮ ಟಿ20 ಪಂದ್ಯದ ತಾಣ, ಪ್ರಸಾರದ ಮಾಹಿತಿ ಇಲ್ಲಿದೆ

ಸೂರ್ಯಕುಮಾರ್‌ ಮತ್ತು ಮಿಚೆಲ್‌ ಮಾರ್ಷ್‌ -

Abhilash BC
Abhilash BC Nov 7, 2025 9:34 AM

ಬ್ರಿಸ್ಬೇನ್‌: ಆಸ್ಟ್ರೇಲಿಯಾ ವಿರುದ್ಧ ಗುರುವಾರ ನಡೆದ 4ನೇ ಟಿ20 ಪಂದ್ಯದಲ್ಲಿ ಭಾರತ(India vs Australia) ತಂಡ 48 ರನ್‌ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು. ಸರಣಿಯ ಅಂತಿಮ(IND vs AUS 5th T20I) ಪಂದ್ಯ ನವೆಂಬರ್‌ 8, ಶನಿವಾರ ಬ್ರಿಸ್ಬೇನ್‌(Brisbane)ನಲ್ಲಿ ನಡೆಯಲಿದೆ. ಸರಣಿ ಸೋಲಿನಿಂದ ಪಾರಾಗಬೇಕಿದ್ದರೆ ಮಿಚೆಲ್‌ ಮಾರ್ಷ್‌ ಬಳಗಕ್ಕೆ ಗೆಲುವು ಅನಿವಾರ್ಯ.

ಪಿಚ್‌ ರಿಪೋರ್ಟ್‌

ಬ್ರಿಸ್ಬೇನ್‌ನ ದಿ ಗಬ್ಬಾದಲ್ಲಿರುವ ಪಿಚ್ ವೇಗದ ಮತ್ತು ಬೌನ್ಸರ್‌ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಇದು ಬ್ಯಾಟ್ ಮತ್ತು ಚೆಂಡಿನ ನಡುವೆ ಉತ್ತಮ ಸಮತೋಲನವನ್ನು ನೀಡುತ್ತದೆ. ಈ ಮೈದಾನದಲ್ಲಿ ಮೊದಲು ನಡೆಸಿದ ತಂಡಗಳೇ ಹೆಚ್ಚು ಗೆದ್ದಿದೆ. ಶೇ.73ರಷ್ಟು ಗೆಲುವಿನ ದಾಖಲೆ ಹೊಂದಿದೆ. ಹೀಗಾಗಿ ಟಾಸ್‌ ಗೆದ್ದ ತಂಡ ಬ್ಯಾಟಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಅಧಿಕ.

ಮುಖಾಮುಖಿ

ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ ಟಿ20ಯಲ್ಲಿ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಗರಿಷ್ಠ 20 ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ 11 ಗೆಲುವು ಮಾತ್ರ ಕಂಡಿದೆ. ಒಂದು ಪಂದ್ಯ ರದ್ದಾಗಿದೆ.

ಭಾರತ -ಆಸ್ಟ್ರೇಲಿಯಾ ಕೊನೆಯ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯ ಗಬ್ಬಾ ಮೈದಾನದಲ್ಲಿ ನಡೆಯಲಿದೆ.

ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:45 ಕ್ಕೆ ಆರಂಭವಾಗಲಿದೆ.

ಪಂದ್ಯ ವೀಕ್ಷಣೆ ಎಲ್ಲಿ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಜಿಯೋ ಹಾಟ್​ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಇದನ್ನೂ ಓದಿ IND vs AUS 4th T20: ಕಳಪೆ ಬ್ಯಾಟಿಂಗ್‌ಗೆ ಬೆಲೆ ತೆತ್ತ ಆಸ್ಟ್ರೇಲಿಯಾ; 4ನೇ ಟಿ20 ಗೆದ್ದ ಭಾರತ

ಸಂಭಾವ್ಯ ತಂಡಗಳು

ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿ.ಕೀ.), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್‌ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಆಸ್ಟ್ರೇಲಿಯಾ: ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಬೆನ್ ಮೆಕ್‌ಡರ್ಮೊಟ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ಮಿಚೆಲ್ ಓವನ್.