Saturday, 23rd November 2024

IND vs AUS: ಆಸ್ಟ್ರೇಲಿಯಾದಲ್ಲಿ ಭಾರತ ಹ್ಯಾಟ್ರಿಕ್‌ ಜಯ ಸಾಧಿಸುವುದು ಪಕ್ಕಾ ಎಂದ ಚೇತನ್‌ ಶರ್ಮಾ!

Chetan Sharma Backs India To Win Down Under, Says 'Pressure Is On Pat Cummins'

ನವದೆಹಲಿ: ಆಸ್ಟ್ರೇಲಿಯಾ ವಿರುದ್ದ ಮುಂಬರುವ ಬಾರ್ಡರ್‌-ಗವಾಸ್ಕರ್‌ ಟ್ರೋಫಿ (IND vs AUS) ಟೆಸ್ಟ್‌ ಸರಣಿಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಗೆಲುವು ಸಾಧಿಸಲಿದೆ ಎಂದು ಬಿಸಿಸಿಐ ಮಾಜಿ ಸೆಲೆಕ್ಟರ್‌ ಚೇತನ್‌ ಶರ್ಮಾ ಭವಿಷ್ಯ ನುಡಿದಿದ್ದಾರೆ. ನ್ಯೂಜಿಲೆಂಡ್‌ ಎದುರು ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ 0-3 ಅಂತರದಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿತ್ತು. ಇದೀಗ ಟೀಮ್‌ ಇಂಡಿಯಾ ಕಾಂಗರೂ ನಾಡಿನಲ್ಲಿ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲು ಎದುರು ನೋಡುತ್ತಿದೆ.

ಎರಡು ದಶಕಗಳ ಹಿಂದೆ ತವರಿನಲ್ಲಿ ಭಾರತ ತಂಡ 0-2 ಅಂತರದಲ್ಲಿ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿತ್ತು. ಇದೀಗ ತವರಿನಲ್ಲಿ ನ್ಯೂಜಿಲೆಂಡ್‌ ಎದುರು ಮೂರು ಪಂದ್ಯಗಳಲ್ಲಿ ಸೋಲುವ ಮೂಲಕ ಟೆಸ್ಟ್‌ ಸರಣಿಯಲ್ಲಿ 0-3 ಅಂತರದಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿದೆ. ಆ ಮೂಲಕ ಆಸ್ಟ್ರೇಲಿಯಾ ಟೆಸ್ಟ್‌ ಸರಣಿಗೂ ಮುನ್ನ ಟೀಮ್‌ ಇಂಡಿಯಾ ವಿಶ್ವಾಸವನ್ನು ಕಳೆದುಕೊಂಡಿದೆ.

ಭಾರತ ಟೆಸ್ಟ್‌ ಸರಣಿ ಗೆಲ್ಲೋದು ಪಕ್ಕಾ ಎಂದ ಚೇತನ್‌ ಶರ್ಮಾ

ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿದ ಬಿಸಿಸಿಐ ಮಾಜಿ ಸೆಲೆಕ್ಟರ್‌ ಚೇತನ್‌ ಶರ್ಮಾ, “ಭಾರತ ತಂಡದ ಬಗ್ಗೆ ವಿಶ್ವಾಸವನ್ನು ಹೊಂದಿದ್ದಾರೆ. ಶೇ. 100ರಷ್ಟು ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ನಾವು ಹ್ಯಾಟ್ರಿಕ್‌ ಗೆಲುವು ಪಡೆಯುತ್ತೇವೆ. ಆಸ್ಟ್ರೇಲಿಯಾ ತಂಡವನ್ನು ಅವರದೇ ಟರ್ಫ್‌ನಲ್ಲಿ ಭಾರತ ತಂಡ ಸೋಲಿಸಲಿದೆ. ನಾವು ಈಗಾಗಲೇ ಆಸ್ಟ್ರೇಲಿಯಾ ತಂಡವನ್ನು ಅವರದೇ ನೆಲದಲ್ಲಿ ಎರಡು ಬಾರಿ ಸೋಲಿಸಿದ್ದೇವೆ. ಹಾಗಾಗಿ ಅವರೇ ತಲೆ ಕೆಡಿಸಿಕೊಳ್ಳಬೇಕೆ ವಿನಃ ನಾವಲ್ಲ,” ಎಂದು ಹೇಳಿದ್ದಾರೆ.

IND vs AUS: ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಫಾರ್ಮ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಚೇತನ್‌ ಶರ್ಮಾ!

“ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಅಥವಾ ಇಂಗ್ಲೆಂಡ್‌ನಲ್ಲಿ ನಾವು ಯಾವಾಗಲೂ ಆನಂದಿಸುತ್ತೇವೆ. ಇದೀಗ ನಮ್ಮ ಪಾಲಿಗೆ ಅತ್ಯುತ್ತಮ ಸಂಗತಿ ಏನೆಂದರೆ, ನಾವು ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿ ವಿದೇಶಿ ಪ್ರವಾಸಕ್ಕೆ ತೆರಳುತ್ತೇವೆ,” ಎಂದು ಚೇತನ್‌ ಶರ್ಮಾ ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ರೋಹಿತ್‌ ಶರ್ಮಾ ಅವರು ಆಸ್ಟ್ರೇಲಿಯಾ ಪ್ರವಾಸದ ಮೊದಲನೇ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಮುನ್ನಡೆಸುವುದು ಯಾರೆಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ರೋಹಿತ್‌ ಶರ್ಮಾ ಸ್ಥಾನಕ್ಕೆ ಕೆಎಲ್‌ ರಾಹುಲ್‌ ಹಾಗೂ ಅಭಿಮನ್ಯು ಈಶ್ವರನ್‌ ಎಂದು ಹೇಳಲಾಗುತ್ತಿದೆ. ಆದರೆ, ಈ ಇಬ್ಬರೂ ಭಾರತ ಎ ವಿರುದ್ದದ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ವಿಫಲರಾಗಿದ್ದಾರೆ.

ND vs AUS: ರಹಸ್ಯ ಸ್ಥಳದಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

ಟೆಸ್ಟ್‌ ಸರಣಿ ಆರಂಭ ಯಾವಾಗ?I

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್‌ ಸರಣಿಯು ನವೆಂಬರ್‌ 22 ರಂದು ಆರಂಭವಾಗಲಿದೆ. ಪರ್ತ್‌ನಲ್ಲಿ ಮೊದಲನೇ ಪಂದ್ಯದ ಮೂಲಕ ಟೆಸ್ಟ್‌ ಸರಣಿ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡ ಪರ್ತ್‌ಗೆ ತೆರಳಿದ್ದು ಅಭ್ಯಾಸವನ್ನು ಆರಂಭಿಸಿದೆ. ಈ ಸರಣಿಯಲ್ಲಿ ಭಾರತ ತಂಡ ಐದು ಪಂದ್ಯಗಳನ್ನು ಆಡಲಿದೆ. ರೋಹಿತ್‌ ಶರ್ಮಾ ಅಲಭ್ಯತೆಯಲ್ಲಿ ಪರ್ತ್‌ ಟೆಸ್ಟ್‌ನಲ್ಲಿ ಭಾರತ ತಂಡವನ್ನು ಜಸ್‌ಪ್ರೀತ್‌ ಬುಮ್ರಾ ಮುನ್ನಡೆಸಬಹುದು.