ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನವೆಂಬರ್ 22 ರಂದು ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲನೇ ಪಂದ್ಯದಲ್ಲಿ ಭಾರತ ತಂಡವನ್ನು ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಮುನ್ನಡೆಸಲಿದದಾರೆ. ಏಕೆಂದರೆ ರೋಹಿತ್ ಶರ್ಮಾ ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಕಾರಣದಿಂದ ಪರ್ತ್‌ನಲ್ಲಿ ಮಾತ್ರ ಬುಮ್ರಾ ಭಾರತ ತಂಂಡದಲ್ಲಿ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಂದ ಹಾಗೆ ಈ ಟೆಸ್ಟ್ ಸರಣಿಯಲ್ಲಿ ಜಸ್‌ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆಯುವ ಸಾಧ್ಯತೆ ಇದೆ.
ಟೀಮ್ ಇಂಡಿಯಾ ವೇಗಿ ಈ ಸರಣಿಯಲ್ಲಿ ಭಾರತ ತಂಡದ ಪರ ತಮ್ಮ 200 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಬಹುದು. ಬುಮ್ರಾ ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ 173 ವಿಕೆಟ್‌ಗಳನ್ನು ಪಡದಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್ ಪಡೆದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ. ಟೀಮ್ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಈ ಸ್ವರೂಪದಲ್ಲಿ ಇದುವರೆಗೆ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
IND vs AUS: ಆಸ್ಟ್ರೇಲಿಯಾ ಟೆಸ್ಟ್ ಸರಣಿ ಗೆಲ್ಲಲು ಭಾರತಕ್ಕೆ ಉಪಯುಕ್ತ ಸಲಹೆ ನೀಡಿದ ಮೈಕಲ್ ವಾನ್!
ಭಾರತದ ಪರ ಅನಿಲ್ ಕುಂಬ್ಳೆ ಅಗ್ರಸ್ಥಾನ
ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಅನಿಲ್ ಕುಂಬ್ಳೆ ಅವರು ಟೀಂ ಇಂಡಿಯಾ ಪರ ರೆಡ್ ಬಾಲ್ ಕ್ರಿಕೆಟ್‌ನಲ್ಲಿ 132 ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ. ಇದಲ್ಲದೇ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 550 ವಿಕೆಟ್ ಪಡೆಯುವ ಉತ್ತಮ ಅವಕಾಶ ಅಶ್ವಿನ್‌ಗೆ ಇದೆ.
ಭಾರತ ತಂಡದ ಪರ ಆರ್ ಅಶ್ವಿನ್ ಇಲ್ಲಿಯವರೆಗೂ ಒಟ್ಟು 105 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಮಾಜಿ ಅನುಭವಿ ವೇಗದ ಬೌಲರ್ ಕಪಿಲ್ ದೇವ್ ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 434 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಇದಲ್ಲದೆ, ಭಾರತದ ಟರ್ಬನೇಟರ್ ಎಂದು ಕರೆಯಲ್ಪಡುವ ಹರ್ಭಜನ್ ಸಿಂಗ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇದೀಗ ಬುಮ್ರಾ ಕೂಡ 200 ಟೆಸ್ಟ್ ವಿಕೆಟ್‌ಗಳ ಕ್ಲಬ್ ಸೇರಲು ಉತ್ತಮ ಅವಕಾಶವಿದೆ.
IND vs AUS: ವಿರಾಟ್ ಕೊಹ್ಲಿ ಕೊಟ್ಟಿದ್ದ ಸಲಹೆಯನ್ನು ರಿವೀಲ್ ಮಾಡಿದ ಯಶಸ್ವಿ ಜೈಸ್ವಾಲ್!
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗೆ ಭಾರತ ತಂಡ
ರಿಷಭ್ ಪಂತ್ (ವಿ.ಕೀ), ಜಸ್‌ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಸರ್ಫರಾಜ್ ಖಾನ್, ಪ್ರಸಿಧ್ ಕೃಷ್ಣ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ , ವಾಷಿಂಗ್ಟನ್ ಸುಂದರ್, ಅಭಿಮನ್ಯು ಈಶ್ವರನ್