ಸಿಡ್ನಿ: ಅದೇ ರಾಗ ಅದೇ ತಾಳ ಎಂಬಂತೆ ಭಾರತ ತಂಡ ಐದನೇ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (IND vs AUS) ಸರಣಿಯ ಕೊನೆಯ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಸಾಧಾರಣ ಮೊತ್ತಕ್ಕೆ ಆಲ್‌ಔಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ, ಸ್ಕಾಟ್ ಬೋಲೆಂಡ್ ಹಾಗೂ ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿ ಪ್ರಥಮ ಇನಿಂಗ್ಸ್‌ನಲ್ಲಿ 185 ರನ್‌ಗಳಿಗೆ ಆಲ್‌ಔಟ್ ಆಯಿತು.
ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಶುಕ್ರವಾರ ಆರಂಭವಾದ ಐದನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಉತ್ತಮ ಆರಂಭ ತಂದುಕೊಡುವಲ್ಲಿ ವಿಫಲರಾದರು. ಕೇವಲ 4 ರನ್ ಗಳಿಸಿ ಆಡುತ್ತಿದ್ದ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾದರು. ತಂಡದ ಮೊತ್ತ 17 ರನ್ ಆಗುವಷ್ಟರಲ್ಲಿ ಯಶಸ್ವಿ ಜೈಸ್ವಾಲ್ (10) ಅವರನ್ನು ಸ್ಕಾಟ್ ಬೋಲೆಂಡ್ ಔಟ್ ಮಾಡಿದರು.
IND vs AUS: ತಪ್ಪು ತಿದ್ದಿಕೊಳ್ಳದ ಪತಿ ವಿರಾಟ್ ಕೊಹ್ಲಿ ವಿರುದ್ಧ ಅನುಷ್ಕಾ ಶರ್ಮಾ ಗರಂ!
ಮೂರನೇ ವಿಕೆಟ್‌ಗೆ ಜೊತಯಾದ ವಿರಾಟ್ ಕೊಹ್ಲಿ ಹಾಗೂ ಶುಭಮನ್ ಗಿಲ್ ಕೆಲಕಾಲ ಆಸೀಸ್ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದರು. ಆದರೆ, 64 ಎಸೆತಗಳಲ್ಲಿ 20 ರನ್ ಗಳಿಸಿ ಆಡುತ್ತಿದ್ದ ಶುಭಮನ್ ಗಿಲ್, ಸ್ಪಿನ್ನರ್ ನೇಥನ್ ಲಯಾನ್‌ಗೆ ವಿಕೆಟ್ ಒಪ್ಪಿಸಿದ್ದರು. ನಂತರ, 17 ರನ್ ಗಳಿಸಿ ತಾಳ್ಮೆಯಿಂದ ಬ್ಯಾಟ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಸಮಯವನ್ನು ಕಳೆಯಲಿಲ್ಲ. ಅವರು ಸ್ಕಾಟ್ ಬೋಲೆಂಡ್ ಎಸೆತದಲ್ಲಿ ಸ್ಲಿಪ್‌ನಲ್ಲಿ ಕ್ಯಾಚ್ ಕೊಟ್ಟು ನಿರಾಶೆ ಮೂಡಿಸಿದರು.
Innings Break!#TeamIndia post 185 in the 1st innings at the Sydney Cricket Ground.
— BCCI (@BCCI) January 3, 2025
Over to our bowlers.
Live – https://t.co/NFmndHLfxu#AUSvIND pic.twitter.com/1585njVwsn
40 ರನ್‌ಗೆ ವಿಕೆಟ್ ಒಪ್ಪಿಸಿದ ಪಂತ್
ಐದನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಕೆಲಕಾಲ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದರು. ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್ ಸಮಯೋಜಿತ ಬ್ಯಾಟಿಂಗ್ ಪ್ರದರ್ಶನ ತೋರಿ 98 ಎಸೆತಗಳಲ್ಲಿ 40 ರನ್‌ಗಳನ್ನು ಕಲೆ ಹಾಕಿದ್ದರು. ಆದರೆ, ಅರ್ಧಶತಕದಂಚಿನಲ್ಲಿ ಪುಲ್ ಶಾಟ್ ಹೊಡೆಯಲು ಪ್ರಯತ್ನಿಸಿ ಸ್ಕಾಟ್ ಬೋಲೆಂಡ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ನಿತೀಶ್ ರೆಡ್ಡಿ ಗೋಲ್ಡನ್ ಡಕ್‌ಔಟ್ ಆದರು. 26 ರನ್ ಗಳಿಸಿದ ರವೀಂದ್ರ ಜಡೇಜಾ ಕೂಡ ಔಟ್ ಆದರು. ವಾಷಿಂಗ್ಟನ್ ಸುಂದರ್ 14 ರನ್‌ಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ72.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲ್‌ಔಟ್ ಆಯಿತು.
ಆಸ್ಟ್ರೇಲಿಯಾ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಸ್ಲಾಟ್ ಬೋಲೆಂಡ್ 31 ರನ್ ನೀಡಿ 4 ವಿಕೆಟ್ ಕಿತ್ತರೆ, ಮಿಚೆಲ್ ಸ್ಟಾರ್ಕ್ 49 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ.
ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿದ ಬುಮ್ರಾ
ಭಾರತ ತಂಡ ಆಲ್‌ಔಟ್ ಆದ ಬಳಿಕ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ತನ್ನ ಮೊದಲನೇ ವಿಕೆಟ್ ಅನ್ನು ಬಹುಬೇಗ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಮೂರನೇ ಓವರ್‌ನ ಕೊನೆಯ ಎಸೆತದಲ್ಲಿ ಉಸ್ಮಾನ್ ಖವಾಜ ಅವರನ್ನು ಜಸ್‌ಪ್ರೀತ್ ಬುಮ್ರಾ ಔಟ್ ಮಾಡಿದರು. ಆ ಮೂಲಕ ಮೊದಲನೇ ದಿನದಟದ ಅಂತ್ಯಕ್ಕೆ ಆಸ್ಟ್ರೇಲಿಯಾ 3 ಓವರ್‌ಗಳಿಗೆ ಒಂದು ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದೆ.
ಈ ಸುದ್ದಿಯನ್ನು ಓದಿ: IND vs AUS: 50ಕ್ಕೂ ಹೆಚ್ಚು ಎಸೆತಗಳನ್ನು ಆಡಿ ಇದೇ ಮೊದಲ ಬಾರಿ ಬೌಂಡರಿ ಗಳಿಸದ ವಿರಾಟ್ ಕೊಹ್ಲಿ!