ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ತಂಡ ಚೇಸಿಂಗ್ ಆಯ್ಕೆ ಮಾಡಿಕೊಂಡಿತು. ಕಳೆದ ಪಂದ್ಯದಂತೆ ಈ ಹಣಾಹಣಿಯಲ್ಲಿ ಟಾಸ್ ಸೋತು ಭಾರತ ತಂಡ ಮೊದಲು ಬ್ಯಾಟ್ ಮಾಡುತ್ತಿದೆ.
ಐದನೇ ಟಿ20ಐ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಪ್ಲೇಯಿಂಗ್ XI ಬಂದಿದ್ದು, ಅರ್ಷದೀಪ್ ಸಿಂಗ್‌ಗೆ ವಿಶ್ರಾಂತಿ ನೀಡಲಾಗಿದೆ. ಇಂಗ್ಲೆಂಡ್ ತಂಡದಲ್ಲಿಯೂ ಒಂದು ಬದಲಾವಣೆಯನ್ನು ತರಲಾಗಿದೆ. ಮಾರ್ಕ್ ವುಡ್ ಅವರು ಪ್ಲೇಯಿಂಗ್ XIಗೆ ಮರಳಿದ್ದಾರೆ.
IND vs ENG: ʻಹರ್ಷಿತ್ ರಾಣಾಗೆ ಅವಕಾಶ ನೀಡಬಾರದಿತ್ತುʼ-ಕನ್ಕಷನ್ ಸಬ್ ವಿರುದ್ಧ ಆಲ್‌ಸ್ಟೈರ್ ಕುಕ್ ಕಿಡಿ!
ಕಳೆದ ಪಂದ್ಯದಲ್ಲಿ ಭಾರತ ತಂಡ ಗೆಲುವು ಪಡೆಯುವ ಮೂಲಕ 3-1 ಅಂತರದಲ್ಲಿ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿತ್ತು. ಇದೀಗ ಐದನೇ ಟಿ20ಐ ಪಂದ್ಯವನ್ನು ಗೆದ್ದು ಟಿ20ಐ ಸರಣಿಯನ್ನು ಗೆಲುವಿನೊಂದಿಗೆ ಮುಗಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೇಮಿ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್
IND vs ENG: 3 ವಿಕೆಟ್ ಪಡೆದ ತಮ್ಮ ಬೌಲಿಂಗ್ ಗೇಮ್‌ಪ್ಲ್ಯಾನ್ ತಿಳಿಸಿದ ರವಿ ಬಿಷ್ಣೋಯ್!
ತಂಡಗಳು
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್(ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೇಮಿ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಜೇಮಿ ಸ್ಮಿತ್, ಮಾರ್ಕ್ ವುಡ್, ಗಸ್ ಅಟ್ಕಿನ್ಸನ್, ರೆಹಾನ್ ಅಹ್ಮದ್
ಭಾರತ: ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್. , ರಮಣದೀಪ್ ಸಿಂಗ್, ಮೊಹಮ್ಮದ್ ಶಮಿ