IND vs ENG: ಐದನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
IND vs ENG 5th T20I Preview: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯ ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ 3-1 ಅಂತರದಲ್ಲಿ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿರುವ ಭಾರತ ತಂಡ ಕೊನೆಯ ಪಂದ್ಯವನ್ನು ಗೆಲ್ಲುವ ವಿಶ್ವಾಸವನ್ನು ಹೊಂದಿದೆ.
ಮುಂಬೈ: ಈಗಾಗಲೇ ಟಿ20ಐ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿರುವ ಭಾರತ ತಂಡ, ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡಯುವ ಐದನೇ ಹಾಗೂ ಟಿ20ಐ ಸರಣಿಯ ಅಂತಿಮ ಪಂದ್ಯದಲ್ಲಿಯೂ ಇಂಗ್ಲೆಂಡ್ ತಂಡವನ್ನು ಮಣಿಸುವ ವಿಶ್ವಾಸದಲ್ಲಿದೆ. ಆದರೆ, ಕೇವಲ ಒಂದೇ ಒಂದು ಪಂದ್ಯವನ್ನು ಗೆದ್ದಿರುವ ಪ್ರವಾಸಿ ತಂಡ, ಕನಿಷ್ಠ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಮುಗಿಸಲು ಎದುರು ನೋಡುತ್ತಿದೆ.
ಪುಣೆಯಲ್ಲಿ ನಡೆದಿದ್ದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿ 15 ರನ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ ಬಹುಬೇಗ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನು ಕಳೆದುಕೊಂಡಿತ್ತು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ನಿರ್ಣಾಯಕ ಅರ್ಧಶತಕಗಳಿಂದ ಭಾರತ 181 ರನ್‌ಗಳನ್ನು ಗಳಿಸಲು ಸಾಧ್ಯವಾಗಿತ್ತು.
IND vs ENG: 3 ವಿಕೆಟ್ ಪಡೆದ ತಮ್ಮ ಬೌಲಿಂಗ್ ಗೇಮ್‌ಪ್ಲ್ಯಾನ್ ತಿಳಿಸಿದ ರವಿ ಬಿಷ್ಣೋಯ್!
ನಂತರ ಗುರಿಯನ್ನು ಹಿಂಬಾಲಿಸಿದ್ದ ಇಂಗ್ಲೆಂಡ್ ಸ್ಪೋಟಕ ಆರಂಭ ಪಡೆದಿದ್ದರೂ ರವಿ ಬಿಷ್ಣೋಯ್ ಸ್ಪಿನ್ ಮೋಡಿ ಹಾಗೂ ಕನ್ಕ್‌ಷನ್ ಸಬ್‌ಸ್ಟಿಟ್ಯೂಟ್ ಹರ್ಷಿತಾ ರಾಣಾ ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿ 166 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಆಂಗ್ಲರು 15 ರನ್‌ಗಳಿಂದ ಸೋಲು ಒಪ್ಪಿಕೊಂಡಿದ್ದರು.
ಇದೀಗ ಐದನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ತನ್ನ ಪ್ಲೇಯಿಂಗ್ XIನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಅರ್ಷದೀಪ್ ಸಿಂಗ್‌ಗೆ ವಿಶ್ರಾಂತಿ ನೀಡಬಹುದು. ಅಲ್ಲದೆ ರಮಣ್‌ದೀಪ್ ಸಿಂಗ್ ಹಾಗೂ ಧ್ರುವ್ ಜುರೆಲ್‌ಗೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ. ಇನ್ನು ಇಂಗ್ಲೆಂಡ್ ತಂಡ, ಮೂರು ಪಂದ್ಯಗಳ ಏಕದಿನ ಸರಣಿಯ ಸಲುವಾಗಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಲು ಎದುರು ನೋಡುತ್ತಿದೆ.
IND vs ENG: ಇಂಗ್ಲೆಂಡ್‌ಗೆ ಸೋಲಿನ ಬರೆ ಎಳೆದು ಟಿ20ಐ ಸರಣಿ ವಶಪಡಿಸಿಕೊಂಡ ಭಾರತ!
ವಾಂಖೆಡೆ ಪಿಚ್ ರಿಪೋರ್ಟ್
ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದ್ದು, ರನ್ ಹೊಳೆ ಹರಿಯುವ ಸಾಧ್ಯತೆ ಇದೆ. ಫಾಸ್ಟ್ ಬೌಲರ್‌ಗಳು ಈ ಪಿಚ್‌ನಲ್ಲಿ ಬೌನ್ಸ್ ಮಾಡಬಹುದು. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಿದರೂ ಈ ಮೈದಾನದ ಬೌಂಡರಿಗಳು ಕಿರಿದಾಗಿರುವ ಕಾರಣ ಬ್ಯಾಟ್ಸ್‌ಮನ್‌ಗಳು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಸುಲಭವಾಗಿ ಹೊಡೆಯಬಹುದು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ
ಇಂಗ್ಲೆಂಡ್: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಸಾಕಿಬ್ ಮಹಮೂದ್, ಆದಿಲ್ ರಶೀದ್
IND vs ENG: ʻಹರ್ಷಿತ್ ರಾಣಾಗೆ ಅವಕಾಶ ನೀಡಬಾರದಿತ್ತುʼ-ಕನ್ಕಷನ್ ಸಬ್ ವಿರುದ್ಧ ಆಲ್‌ಸ್ಟೈರ್ ಕುಕ್ ಕಿಡಿ!
ಪಂದ್ಯದ ವಿವರ
ಐದನೇ ಟಿ20ಐ ಪಂದ್ಯ
ಭಾರತ vs ಇಂಗ್ಲೆಂಡ್
ದಿನಾಂಕ: ಫೆಬ್ರವರಿ 2, 2025
ಸಮಯ: ಸಂಜೆ 07:00ಕ್ಕೆ ಆರಂಭ
ಸ್ಥಳ: ವಾಂಖೆಡೆ ಕ್ರೀಡಾಂಗಣ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್
ಮುಖಾಮುಖಿ ದಾಖಲೆ
ಒಟ್ಟು ಆಡಿದ ಪಂದ್ಯಗಳು: 28
ಭಾರತ ತಂಡದ ಗೆಲುವು: 16
ಇಂಗ್ಲೆಂಡ್ ತಂಡದ ಗೆಲುವು: 12