IND vs ENG: ಮೊದಲನೇ ಎಸೆತದಲ್ಲಿ ಬೌಂಡರಿ ಬಾರಿಸಿ ವಿಶ್ವ ದಾಖಲೆ ಬರೆದ ಫಿಲ್ ಸಾಲ್ಟ್!
Phil Salt Creates world Record: ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರು ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅತಿ ಹೆಚ್ಚು ಬಾರಿ ಟಿ20ಐ ಇನಿಂಗ್ಸ್‌ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಅಪರೂಪದ ದಾಖಲೆಯನ್ನು ಫಿಲ್ ಸಾಲ್ಟ್ ಬರೆದಿದ್ದಾರೆ.
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ 150 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು. ಆದರೂ ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಸದ್ದಿಲ್ಲದೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 9 ವಿಕೆಟ್‌ಗಳ ನಷ್ಟಕ್ಕೆ 247 ರನ್‌ಗಳನ್ನು ಕಲೆ ಹಾಕಿತು. ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ಶತಕವನ್ನು ಸಿಡಿಸಿದರು. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ವೇಗವಾಗಿ ಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.
IND vs ENG: ಅಭಿಷೇಕ್ ಶರ್ಮಾ ಬ್ಯಾಟಿಂಗ್ ಅಬ್ಬರ, ಕೊನೆಯ ಪಂದ್ಯವನ್ನೂ ಗೆದ್ದ ಭಾರತ!
ಬಳಿಕ ಗುರಿ ಹಿಂಬಾಲಿಸಿದ ಇಂಗ್ಲೆಂಡ್ ತಂಡದ ಪರ ಫಿಲ್ ಸಾಲ್ಟ್ ಬಿಟ್ಟರೆ ಬೇರೆ ಯಾವುದೇ ಬ್ಯಾಟ್ಸ್‌ಮನ್ ದೀರ್ಘಾವಧಿ ಬ್ಯಾಟ್ ಮಾಡಲು ಸಾಧ್ಯವಾಗಲಿಲ್ಲ. ಅಂದ ಹಾಗೆ ಆಂಗ್ಲರ ಪರ ಇನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್, ಮೊಟ್ಟ ಮೊದಲ ಎಸೆತದಲ್ಲಿಯೇ ಮೊಹಮ್ಮದ್ ಶಮಿಗೆ ಬೌಂಡರಿ ಬಾರಿಸಿದರು. ಆ ಮೂಲಕ ಟಿ20ಐ ಕ್ರಿಕೆಟ್ ಇನಿಂಗ್ಸ್‌ನ ಮೊದಲ ಎಸೆತದಲ್ಲಿ 37ನೇ ಬಾರಿ ಫಿಲ್ ಸಾಲ್ಟ್ ಬೌಂಡರಿ ಬಾರಿಸಿದಂತಾಯಿತು. ಆ ಮೂಲಕ ಟಿ20ಐ ನಲ್ಲಿ ಅತಿ ಹೆಚ್ಚು ಬಾರಿ ಇನಿಂಗ್ಸ್‌ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ.
ಅರ್ಧಶತಕ ಸಿಡಿಸಿದ ಫಿಲ್ ಸಾಲ್ಟ್
ಇಂಗ್ಲೆಂಡ್ ತಂಡದ ಪರ ವಿಕೆಟ್‌ಗಳು ನಿಯಮಿತವಾಗಿ ಉರುಳಿದರೂ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ್ದ ಫಿಲ್ ಸಾಲ್ಟ್ ಅವರು ಭರ್ಜರಿ ಅರ್ಧಶತಕವನ್ನು ಸಿಡಿಸಿದರು. 23 ಎಸೆತಗಳನ್ನು ಎದುರಿಸಿದ ಅವರು 3 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ 55 ರನ್‌ಗಳನ್ನು ಕಲೆ ಹಾಕಿದರು. ನಂತರ ಅವರು ಶಿವಂ ದುಬೆ ಅವರ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
IND vs ENG: ಸ್ಪೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ!
ಆದರೆ, ಇನ್ನಿತರ ಬ್ಯಾಟ್ಸ್‌ಮನ್‌ಗಳು ಸ್ಕೋರ್ ಬೋರ್ಡ್ ಒತ್ತಡದಲ್ಲಿ ಬಿರುಸಿನ ಬ್ಯಾಟಿಂಗ್‌ಗೆ ಕೈ ಹಾಕಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಫಿಲ್ ಸಾಲ್ಟ್ ಜೊತೆಗೆ ಜಾಕೋಬ್ ಬೆಥೆಲ್ 10 ರನ್ ಗಳಿಸಿದರು. ಅವರನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಎರಡಂಕಿ ವೈಯಕ್ತಿಕ ಮೊತ್ತವನ್ನು ಕಲೆ ಹಾಕಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ 97 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ 150 ರನ್‌ಗಳಿಂದ ಸೋಲು ಅನುಭವಿಸಿತು.
ಟಿ20ಐ ಸರಣಿ ಗೆದ್ದ ಇಂಗ್ಲೆಂಡ್ ತಂಡ
ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿದ್ದು ಬಿಟ್ಟರೆ ಇನ್ನುಳಿದ ನಾಲ್ಕೂ ಪಂದ್ಯಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಟಿ20ಐ ಸರಣಿಯನ್ನು 3-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಇದೀಗ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿವೆ.