ಇಂದೋರ್, ಜ.17: ಮೊದಲ ಎರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿ ತಲಾ ಒಂದು ಗೆಲುವು ಸಾಧಿಸಿರುವ ಭಾರತ ಮತ್ತು ನ್ಯೂಜಿಲ್ಯಾಂಡ್(IND vs NZ 3rd ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಸರಣಿ ಗೆಲುವಿನ ವಿಶ್ವಾಸದೊಂದಿಗೆ ಭಾನುವಾರ(ಜ.18) ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ(Holkar Cricket Stadium) ಕಾದಾಟ ನಡೆಸಲಿದೆ. ಈ ಪಂದ್ಯದ ಹವಾಮಾನ ಮತ್ತು ಪಿಚ್ ವರದಿಯ ಮಾಹಿತಿ ಇಲ್ಲಿದೆ.
ಹವಾಮಾನ
ಇತ್ತಂಡಗಳ ಹೈವೋಲ್ಟೇಜ್ ಪಂದ್ಯಕ್ಕೆ ಯಾವುದೇ ಮಳೆ ಆತಂಕವಿಲ್ಲ. ಪಂದ್ಯದ ವೇಳೆ ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 13°C ಇರಬಹುದೆಂದು ಅಂದಾಜಿಸಲಾಗಿದೆ. ಪಂದ್ಯವನ್ನು ಅಭಿಮಾನಿಗಳು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು.
ಪಿಚ್ ರಿಪೋರ್ಟ್
ಪಂದ್ಯ ನಡೆಯುವ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣವು ಬ್ಯಾಟಿಂಗ್‌ಗೆ ಹೆಸರುವಾಸಿ. ಮೊದಲು ಬ್ಯಾಟಿಂಗ್ ಮಾಡುವ ತಂಡವು ಕನಿಷ್ಠ 340-350 ರನ್ ಗಳಿಸಲು ನೋಡಬೇಕು. ಏಕೆಂದರೆ ಇದಕ್ಕಿಂತ ಕಡಿಮೆ ಮೊತ್ತವನ್ನು ರಕ್ಷಿಸುವುದು ಬೌಲರ್‌ಗಳಿಗೆ ಕಷ್ಟಕರ. ಪಿಚ್ ಸಮತಟ್ಟಾಗಿದ್ದು, ಸಣ್ಣ ಬೌಂಡರಿಗಳನ್ನು ಹೊಂದಿದೆ. ಜೊತೆಗೆ ಇಬ್ಬನಿಯ ಕಾಟ ಇರುವ ಕಾರಣ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆಯಿದೆ.
ಮುಖಾಮುಖಿ
ಒಟ್ಟು ಏಕದಿನ ಪಂದ್ಯಗಳು: 121
ಭಾರತ ಗೆಲುವು: 63
ನ್ಯೂಜಿಲೆಂಡ್ ಗೆಲುವು: 50
ಟೈ: 1
ಫಲಿತಾಂಶವಿಲ್ಲ: 7
ಸಂಭಾವ್ಯ ತಂಡಗಳು
ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಆಯುಷ್ ಬಡೋನಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್.
3ನೇ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ; ಆಯುಷ್ ಬದೋನಿ ಪದಾರ್ಪಣೆ ನಿರೀಕ್ಷೆ
ನ್ಯೂಜಿಲ್ಯಾಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್ (ನಾಯಕ), ಜ್ಯಾಕ್ ಫೌಲ್ಕ್ಸ್, ಜೋಶ್ ಕ್ಲಾರ್ಕ್ಸನ್, ಜೇಡೆನ್ ಲೆನಾಕ್ಸ್, ಕೈಲ್ ಜೇಮಿಸನ್, ಕ್ರಿಸ್ಟಿಯನ್ ಕ್ಲಾರ್ಕ್.
ಪಂದ್ಯ ಆರಂಭ: ಮಧ್ಯಾಹ್ನ 1:30 ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್,ಜಿಯೋಹಾಟ್‌ಸ್ಟಾರ್.