IND vs NZ Final: ಫೈನಲ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಮಳೆ ನಿಯಮ ಹೇಗಿದೆ?
ಭಾರತ ಮತ್ತು ನ್ಯೂಜಿಲ್ಯಾಂಡ್ ಐಸಿಸಿ ಟೂರ್ನಿಯಲ್ಲಿ ಒಟ್ಟು 19 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಕೇವಲ 5 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಕಿವೀಸ್ ಗರಿಷ್ಠ 12 ಪಂದ್ಯದಲ್ಲಿ ಜಯ ಸಾಧಿಸಿದೆ. 2 ಪಂದ್ಯ ಫಲಿತಾಂಶ ಕಂಡಿಲ್ಲ. ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಬಾರಿ ಫೈನಲ್ ಮುಖಾಮುಖಿಯಾಗಿದ್ದು ಭಾರತ ಸೋಲು ಕಂಡಿತ್ತು.


ದುಬೈ: ಅಜೇಯವಾಗಿ ಬೀಗುತ್ತಿರುವ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾನುವಾರ ನ್ಯೂಜಿಲ್ಯಾಂಡ್ ವಿರುದ್ಧ ಸೆಣಸಲಿದೆ. ದುಬೈನಲ್ಲೇ ಆಡಿದ 3 ಲೀಗ್ ಮತ್ತು ಸೆಮಿಫೈನಲ್ ಪಂದ್ಯಗಳಲ್ಲಿ ಸರ್ವಾಂಗೀಣ ನಿರ್ವಹಣೆಯೊಂದಿಗೆ ಗೆದ್ದಿರುವ ರೋಹಿತ್ ಶರ್ಮ, ಕಿವೀಸ್‌ಗಳ ವಿರುದ್ಧವೂ ಇದೇ ಲಯದಲ್ಲಿ ಮುಂದುವರಿಯುವ ಹಂಬಲದಲ್ಲಿದೆ. ಈ ಮೂಲಕ 2021ರ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಮತ್ತು 2000ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಗಳ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕ ಭಾರತ ತಂಡದ್ದಾಗಿದೆ. ಈ ಪಂದ್ಯ ಪಿಚ್ ರಿಪೋರ್ಟ್, ಸಂಭಾವ್ಯ ತಂಡ ಮತ್ತು ಹವಾಮಾನ ವರದಿಯ ಮಾಹಿತಿ ಇಲ್ಲಿದೆ.
ಪಿಚ್ ರಿಪೋರ್ಟ್
ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ನಡೆದಿದ್ದ ಪಿಚ್‌ನಲ್ಲಿಯೇ ಫೈನಲ್ ಆಯೋಜನೆಗೊಳ್ಳಲಿದೆ. ಈ ಪಿಚ್ ಸ್ಪಿನ್ ಬೌಲಿಂಗ್‌ಗೆ ಹೆಚ್ಚು ನೆರವು ನೀಡುವ ನಿರೀಕ್ಷೆ ಇದೆ. ದುಬೈನ ಯಾವುದೇ ಪಿಚ್‌ನಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್ ನಿಧಾನಗೊಳ್ಳಲಿದೆ. 270-280 ರನ್ ಗೆಲ್ಲುವ ಸ್ಕೋರ್ ಆಗಬಹುದು. ಕಿವೀಸ್ ವಿರುದ್ಧ ಕೊನೇ ಲೀಗ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ನಾಲ್ವರು ಸ್ಪಿನ್ ಬೌಲರ್‌ಗಳನ್ನು ಕಣಕ್ಕಿಳಿಸಿ ಯಶಸ್ಸು ಕಂಡಿರುವ ಭಾರತ. ಇದೀಗ ಫೈನಲ್‌ನಲ್ಲಿಯೂ ಇದೇ ಕಾರ್ಯತಂತ್ರ ಮುಂದುವರಿಸುವ ನಿರೀಕ್ಷೆ ಇದೆ.
ಇದನ್ನೂ ಓದಿ IND vs NZ: ಫೈನಲ್‌ನಲ್ಲಿ ಭಾರತಕ್ಕೆ ಅಪಾಯವಿದೆ, ಒಮ್ಮೆ ಮುಖಾಮುಖಿ ದಾಖಲೆ ನೋಡಿ!
ಮಳೆ ಬಂದರೆ...
ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ, ಅದೆ ದಿನ ಪಂದ್ಯ ಪೂರ್ಣಗೊಳಿಸಲು ಪ್ರಯತ್ನಿಸಲಾಗಿತ್ತದೆ. ಇದರ ಹೊರತಾಗಿಯೂ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಆಗ ಮೀಸಲು ದಿನಕ್ಕೆ(ಮಾ.10) ಪಂದ್ಯವನ್ನು ಮುಂದೂಡಲಾಗುತ್ತದೆ. ಮೀಸಲು ದಿನದಂದೂ ಕೂಡ ಮಳೆಯಿಂದ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ದರೆ, ಆಗ ಜಂಟಿ ವಿಜೇತರನ್ನಾಗಿ ಘೋಷಿಸಲಾಗುತ್ತದೆ.
ಭಾರತ-ನ್ಯೂಜಿಲ್ಯಾಂಡ್ ಐಸಿಸಿ ಮುಖಾಮುಖಿ
ಭಾರತ ಮತ್ತು ನ್ಯೂಜಿಲ್ಯಾಂಡ್ ಐಸಿಸಿ ಟೂರ್ನಿಯಲ್ಲಿ ಒಟ್ಟು 19 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಕೇವಲ 5 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಕಿವೀಸ್ ಗರಿಷ್ಠ 12 ಪಂದ್ಯದಲ್ಲಿ ಜಯ ಸಾಧಿಸಿದೆ. 2 ಪಂದ್ಯ ಫಲಿತಾಂಶ ಕಂಡಿಲ್ಲ. ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಬಾರಿ ಫೈನಲ್ ಮುಖಾಮುಖಿಯಾಗಿದ್ದು ಭಾರತ ಸೋಲು ಕಂಡಿತ್ತು.
ಸಂಭಾವ್ಯ ತಂಡಗಳು
ಭಾರತ: ರೋಹಿತ್ ಶರ್ಮ (ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ಡೆವೋನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿ ಕಿ), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಮ್ ರೌರ್ಕಿ