IND vs PAK: ಇಂಡೋ-ಪಾಕ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ ಹೇಗಿದೆ?
ಭಾರತ ಮತ್ತು ಪಾಕಿಸ್ತಾನ(IND vs PAK) ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 135 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 73 ಪಂದ್ಯ ಗೆದ್ದಿದ್ದರೆ, ಪಾಕಿಸ್ತಾನ 57 ಪಂದ್ಯಗಳಲ್ಲಿ ಗೆದ್ದಿದೆ. 5 ಪಂದ್ಯಗಳು ಫಲಿತಾಂಶ ಕಂಡಿಲ್ಲ. ಇತ್ತಂಡಗಳು ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದು 2023ರ ಏಕದಿನ ಲೀಗ್ ಪಂದ್ಯದಲ್ಲಿ ಅಂದು ಭಾರತ 7 ವಿಕೆಟ್ ಅಂತರದ ಗೆಲುವು ಸಾಧಿಸಿತ್ತು.


ದುಬೈ: ಚಾಂಪಿಯನ್ಸ್ ಟ್ರೋಫಿಯ(Champions Trophy) ಅತ್ಯಂತ ಮಹತ್ವದ ಭಾರತ-ಪಾಕಿಸ್ತಾನ(IND vs PAK) ನಡುವಿನ ಪಂದ್ಯವು ಭಾನುವಾರ(ಫೆ.23) ನಡೆಯಲಿದೆ. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೀಗ ಈ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ ಮತ್ತು ಆಡುವ ಬಳಗದ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಿಚ್ ರಿಪೋರ್ಟ್
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಪಿಚ್ ಸ್ಮರ್ಧಾತ್ಮಕವಾಗಿದ್ದು, ಸ್ಪಿನ್ನರ್‌ಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಇದು ಈಗಾಗಲೇ ಸಾಬೀತಾಗಿದೆ. ಭಾರತ ಮತ್ತು ಬಾಂಗ್ಲಾ ನಡುವಣ ಪಂದ್ಯದಲ್ಲಿ ಸ್ಪಿನ್ನರ್‌ಗಳೇ ಹೆಚ್ಚಿನ ವಿಕೆಟ್ ಉರುಳಿಸಿದ್ದರು., ಆದ್ಯಾಗೂ ವೇಗಿಗಳಿಗೂ ನೆರವು ನೀಡಲಿದೆ. ಮೊದಲ ಇನಿಂಗ್ಸ್‌ನ ಸರಾಸರಿ ಮೊತ್ತ 218 ಆಗಿದೆ. ರಾತ್ರಿ ವೇಳೆ ಅತಿಯಾದ ಇಬ್ಬನಿ ಕಾಟ ಇರುವುದರಿಂದ ಚೇಸಿಂಗ್ ನಡೆಸುವ ತಂಡಕ್ಕೆ ಸಹಕಾರಿ. ಇಲ್ಲಿ ಇದುವರೆಗೂ ನಡೆದ 59 ಏಕದಿನದಲ್ಲಿ 35 ಪಂದ್ಯಗಳಲ್ಲಿ ಚೇಸಿಂಗ್ ನಡೆಸಿದ ತಂಡ ಗೆಲುವು ಸಾಧಿಸಿದೆ. 22 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಜಯಿಸಿದೆ.
ಮುಖಾಮುಖಿ
ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 135 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 73 ಪಂದ್ಯ ಗೆದ್ದಿದ್ದರೆ, ಪಾಕಿಸ್ತಾನ 57 ಪಂದ್ಯಗಳಲ್ಲಿ ಗೆದ್ದಿದೆ. 5 ಪಂದ್ಯಗಳು ಫಲಿತಾಂಶ ಕಂಡಿಲ್ಲ. ಇತ್ತಂಡಗಳು ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದು 2023ರ ಏಕದಿನ ಲೀಗ್ ಪಂದ್ಯದಲ್ಲಿ ಅಂದು ಭಾರತ 7 ವಿಕೆಟ್ ಅಂತರದ ಗೆಲುವು ಸಾಧಿಸಿತ್ತು.
My eyes are on the TV, but my brain:
— SureshMaurya (@suresh_maurya_) February 20, 2025
Feb 23rd #ChampionsTrophy2025 #INDvsPAK pic.twitter.com/DDU59trMjB
ಚಾಂಪಿಯನ್ಸ್ ಟ್ರೋಫಿಯಲ್ಲಿ ಇತಿಹಾಸದಲ್ಲಿ ಭಾರತ ಮತ್ತು ಪಾಕ್(IND vs PAK) 5 ಪಂದ್ಯಗಳಲ್ಲಿ ಆಡಿದ್ದು, 3ರಲ್ಲಿ ಪಾಕಿಸ್ತಾನ ಗೆದ್ದರೆ, ಭಾರತ 2 ಪಂದ್ಯ ಮಾತ್ರ ಜಯಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2017ರ ಫೈನಲ್ನಲ್ಲಿ ಎದುರಾಗಿತ್ತು. ಅಂದಿನ ಫೈನಲ್ ಬಳಿಕ ಉಭಯ ತಂಡಗಳೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲ ಬಾರಿ.
ಇದನ್ನೂ ಓದಿ Champions Trophy: ಪಾಕ್ ವಿರುದ್ಧ ಭಾರತದ ದಾಖಲೆ ಹೇಗಿದೆ?
ಹವಾಮಾನ ವರದಿ
ಹವಾಮಾನ ವರದಿ ಪ್ರಕಾರ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಇಲ್ಲ. ಮಧ್ಯಾಹ್ನ ಸುಡು ಬಿಸಲು ಇದ್ದರೂ, ರಾತ್ರಿ ಮಂಜಿನ ಕಾಟ ಇರಲಿದೆ ಎಂದು ತಿಳಿಸಿದೆ.
ಸಂಭಾವ್ಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್(ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ,ಕುಲ್‌ದೀಪ್ ಯಾದವ್.
ಪಾಕಿಸ್ತಾನ: ಬಾಬರ್ ಅಜಂ, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿ.ಕೀ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.