ದುಬೈ: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವೆ ಇಂದು ನಡೆಯುವ ಏಷ್ಯಾಕಪ್ ಟಿ20(Asia Cup 2025) ಸೂಪರ್-4 ಹೈವೋಲ್ಟೇಜ್ ಪಂದ್ಯ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಪಂದ್ಯಕ್ಕೂ ಮುನ್ನ ದುಬೈ ಪಿಚ್ ಹೇಗಿದೆ?, ಯಾರಿಗೆ(IND vs PAK pitch report) ಸಹಕಾರಿ ಎಂಬ ಮಾಹಿತಿ ಇಲ್ಲಿದೆ.
ಬ್ಯಾಟರ್‌ಗಳಿಗೆ ಸವಾಲಿನ ಪಿಚ್
ಈ ಬಾರಿಯ ಏಷ್ಯಾಕಪ್‌ನಲ್ಲಿ ದುಬೈ ಅಂಗಳದಲ್ಲಿ ಒಟ್ಟು 6 ಪಂದ್ಯಗಳು ನಡೆದಿವೆ. ಎಲ್ಲ ಪಂದ್ಯಗಳು ಸಾಧಾರಣ ಮೊತ್ತಕ್ಕೆ ಸೀಮಿತವಾಗಿತ್ತು. ಬೌಲರ್‌ಗಳೇ ಇಲ್ಲಿ ಮೇಲುಗೈ ಸಾಧಿಸಿದ್ದರು. ಅದರಲ್ಲೂ ಸ್ಪಿನ್ನರ್‌ಗಳು. ಹೀಗಾಗಿ ಇತ್ತಂಡಗಳು ಸ್ಪಿನ್ನರ್‌ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬಹುದು. ಇಲ್ಲಿನ ಮೊದಲ ನಿಂಗ್ಸ್ ಸರಾಸರಿ ಸ್ಕೋರ್ 128. ಚೇಸಿಂಗ್ ನಡೆಸುವ ತಂಡಕ್ಕೆ ಈ ಪಿಚ್ ಹೆಚ್ಚು ಸಹಕಾರಿಯಾದ ಕಾರಣ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ದುಕೊಂಡರೆ ಉತ್ತಮ.
ದುಬೈನಲ್ಲಿ ಒಟ್ಟಾರೆ ಟಿ20 ಪಂದ್ಯಗಳ ದಾಖಲೆ ನೋಡುವುದಾದರೆ, ಇದುವರೆಗೆ 116 ಪಂದ್ಯಗಳು ನಡೆದಿದ್ದು, ಈ ಪೈಕಿ 62 ಪಂದ್ಯಗಳಲ್ಲಿ ಚೇಸಿಂಗ್ ನಡೆಸಿದ ತಂಡಗಳು ಗೆದ್ದಿದೆ. 53 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಜಯಿಸಿದೆ.
ಉಭಯ ಸಂಭಾವ್ಯ ತಂಡಗಳು
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್ (ವಿ.ಕೀ.), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ IND vs PAK: ಪಾಕ್ ವಿರೋಧದ ಮಧ್ಯೆಯೂ ಸೂಪರ್ 4 ಪಂದ್ಯಕ್ಕೆ ಪೈಕ್ರಾಫ್ಟ್ ಮ್ಯಾಚ್ ರೆಫರಿ
ಪಾಕಿಸ್ತಾನ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಮೊಹಮ್ಮದ್ ಹ್ಯಾರಿಸ್ (ವಿ.ಕೀ.), ಫಖರ್ ಜಮಾನ್, ಸಲ್ಮಾನ್ ಅಘಾ (ನಾಯಕ), ಖುಶ್ದಿಲ್ ಶಾ, ಹಸನ್ ನವಾಜ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.