ರಾಯ್ಪುರ, ಡಿ. 1: ಪ್ರವಾಸಿ ದಕ್ಷಿಣ ಆಫ್ರಿಕಾ(IND vs SA 2nd odi) ವಿರುದ್ಧ ಮೊದಲ ಪಂದ್ಯದಲ್ಲಿ 17 ರನ್ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ಇದೀಗ ದ್ವಿತೀಯ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಇತ್ತಂಡಗಳ ನಡುವಣ ದ್ವಿತೀಯ ಮುಖಾಮುಖಿ ಯಾವಾಗ, ಎಲ್ಲಿ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ದ್ವಿತೀಯ ಪಂದ್ಯ ಡಿ.3 ರಂದು ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ ಜೀವಂತವಿರಿಸಿಕೊಳ್ಳಬೇಕಿದ್ದರೆ ಪ್ರವಾಸಿ ತಂಡಕ್ಕೆ ಗೆಲುವು ಅನಿವಾರ್ಯ.
ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗಲ್ಲಿ ಯಾವುದೇ ಬಲಾವಣೆ ಮಾಡುವುದು ಅನುಮಾನ. ಆದರೆ ದಕ್ಷಿಣ ಆಫ್ರಿಕಾ ತಂಡ ಒಂದು ಬಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೆಂಬ ಬವುಮಾ ಈ ಪಂದ್ಯದಲ್ಲಿ ಆಡುವ ಜತೆಗೆ ತಂಡದ ನಾಯಕತ್ವ ನಿರ್ವಹಿಸಲಿದ್ದಾರೆ. ಆದರೆ ಅವರಗಾಗಿ ಯಾರು ಜಾಗ ಬಿಟ್ಟುಕೊಡಲಿದ್ದಾರೆ ಎನ್ನುವುದು ಕುತೂಹಲ.
ಇದನ್ನೂ ಓದಿ IND vs SA: ಬೃಹತ್ ಮೊತ್ತದ ಮೇಲಾಟದಲ್ಲಿ ಹೋರಾಡಿ ಸೋತ ಹರಿಣ ಪಡೆ
ಭಾರತ ಏಕದಿನ ತಂಡ
ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್.
ದಕ್ಷಿಣ ಆಫ್ರಿಕಾದ ಏಕದಿನ ತಂಡ
ಟೆಂಬಾ ಬವುಮಾ (ನಾಯಕ), ಏಡೆನ್ ಮಾರ್ಕ್ರಾಮ್, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಮಾರ್ಕೊ ಜಾನ್ಸೆನ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಕೇಶವ್ ಮಹಾರಾಜ್, ಲುಂಗಿ ಆರ್‌ನಿಕ್‌ರೇಟನ್, ಲುಂಗಿ ಆರ್‌ನಿಕ್‌ರೇಟನ್.
ಪ್ರಸಾರ
ಭಾರತ vs ದಕ್ಷಿಣ ಆಫ್ರಿಕಾ ODI ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ HD ಮತ್ತು SD ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಲೈವ್ ಸ್ಟ್ರೀಮಿಂಗ್ JioCinema / Disney+ Hotstar ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.