ಲಖನೌ, ಡಿ.17: ಭಾರತ ಮತ್ತು ದಕ್ಷಿಣ ಆಫ್ರಿಕಾ(India vs South Africa) ಎದುರಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ(IND vs SA 4th T20I) ಇಂದು(ಬುಧವಾರ) ಇಲ್ಲಿನ ಏಕನಾ ಕ್ರೀಡಾಂಗಣ(Ekana Cricket Stadium)ದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ.
ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ರನ್ ಗಳಿಸುವ ಒತ್ತಡ ಹೆಚ್ಚುತ್ತಿದೆ. ಕಳೆದ ಹಲವು ಪಂದ್ಯಗಳಲ್ಲಿ ಅವರು ಬ್ಯಾಟಿಂಗ್ ವೈಫಲ್ಯರಾಗಿದ್ದರು. ಅಕ್ಷರ್ ಪಟೇಲ್ ಅನಾರೋಗ್ಯದ ಕಾರಣದಿಂದ ವಿಶ್ರಾಂತಿ ಪಡೆದಿದ್ದಾರೆ. ಅವರ ಸ್ಥಾನಕ್ಕೆ ಶಾಬಾಜ್ ಅಹಮದ್ ಅವಕಾಶ ಪಡೆದಿದ್ದರೂ ಆಡುಬ ಬಳಗದಲ್ಲಿ ಅವಕಾಶ ಕಷ್ಟ. ಕುಲದೀಪ್ ಯಾದವ್ ಅವರಿಗೆ ಮತ್ತಷ್ಟು ಅವಕಾಶಗಳು ಸಿಗಲಿವೆ. ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಮತ್ತು ಹರ್ಷಿತ್ ರಾಣಾ ಈ ಪಂದ್ಯದಲ್ಲಿಯ ಆಡುವುದು ಖಚಿತ.
ದಕ್ಷಿಣ ಆಫ್ರಿಕಾ ತಂಡವು ಡೊನೊವನ್ ಫೆರೀರಾ ಬದಲಿಗೆ ಅನುಭವಿ ಡೇವಿಡ್ ಮಿಲ್ಲರ್ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳಬಹುದು. ಏಕೆಂದರೆ ಮಿಲ್ಲರ್ ಹೆಚ್ಚಿನ ಒತ್ತಡದ ಪರಿಸ್ಥಿತಿಗಳಲ್ಲಿ ತಂಡಕ್ಕೆ ನೆರವಾಗಬಲ್ಲರು. ಎಡಗೈ ಸೀಮರ್ ಕ್ವೆನಾ ಮಪಾಖಾ ಅವರು ನಡೆಯುತ್ತಿರುವ ಸರಣಿಯಲ್ಲಿ ಇನ್ನೂ ಕಾಣಿಸಿಕೊಳ್ಳದ ಕಾರಣ, ಅವರಿಗೆ ಅವಕಾಶ ನೀಡುವ ಬಗ್ಗೆಯೂ ಹರಿಣ ಪಡೆ ಚಿಂತಿಸಬಹುದು.
ಇದನ್ನೂ ಓದಿ 4ನೇ ಟಿ20ಯಲ್ಲಿ ಸ್ಯಾಮ್ಸನ್‌ಗೆ ಅವಕಾಶ; ಹೊರಗುಳಿಯುವ ಆಟಗಾರ ಯಾರು?
ಸಂಭಾವ್ಯ ತಂಡ
ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿ.ಕೀ.), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೀರಾ, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಒಟ್ನೀಲ್ ಬಾರ್ಟ್‌ಮನ್.