ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA: 93 ವರ್ಷಗಳಲ್ಲಿ ಮೊದಲ ಬಾರಿಗೆ; ವಿಶೇಷ ದಾಖಲೆ ಬರೆದ ಟೀಮ್‌ ಇಂಡಿಯಾ

ಫ್ರೀಡಂ ಟ್ರೋಫಿಯ ಮೊದಲ ಟೆಸ್ಟ್‌ಗಾಗಿ ಭಾರತ ತನ್ನ ಆಡುವ ಬಗಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಂಡಿತು. ತಮಿಳುನಾಡಿನ ಬಿ ಸಾಯಿ ಸುದರ್ಶನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಕೈಬಿಟ್ಟು ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಯಿತು. ಅಕ್ಷರ್‌ ಫೆಬ್ರವರಿ 2024 ರ ನಂತರ ಮೊದಲ ಬಾರಿಗೆ ಭಾರತದ ಆಡುವ ಬಳಗದಲ್ಲಿ ಕಾಣಿಸಿಕೊಂಡರು.

93 ವರ್ಷಗಳಲ್ಲಿ ಮೊದಲ ಬಾರಿಗೆ; ವಿಶೇಷ ದಾಖಲೆ ಬರೆದ ಟೀಮ್‌ ಇಂಡಿಯಾ

ದಕ್ಷಿಣ ಆಫ್ರಿಕಾ ಟೆಸ್ಟ್‌ನಲ್ಲಿ ವಿಶೇಷ ದಾಖಲೆ ಬರೆದ ಟೀಮ್‌ ಇಂಡಿಯಾ -

Abhilash BC
Abhilash BC Nov 14, 2025 10:33 AM

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧ ಶುಕ್ರವಾರ ಆರಂಭಗೊಂಡ ಮೊದಲ ಟೆಸ್ಟ್‌(IND vs SA) ಪಂದ್ಯದಲ್ಲಿ ಭಾರತ ವಿಶೇಷ ದಾಖಲೆಯೊಂದನ್ನು ಬರೆದಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 93 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತೀಯ ಪುರುಷರ ಕ್ರಿಕೆಟ್ ತಂಡವು ಆರು ಎಡಗೈ ಬ್ಯಾಟ್ಸ್‌ಮನ್‌ಗಳೊಂದಿಗೆ ಪಂದ್ಯವನ್ನು ಆಡಲಿಳಿಯಿತು. ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಭಾರತದ ಪ್ಲೇಯಿಂಗ್ ಇಲೆವೆನ್‌ನ ಎಡಗೈ ಬ್ಯಾಟರ್‌ಗಳು.

ಹಿಂದೆ ಹಲವು ಸಂದರ್ಭಗಳಲ್ಲಿ ಭಾರತ ತಂಡದಲ್ಲಿ ನಾಲ್ವರು ಎಡಗೈ ಬೌಲರ್‌ಗಳೊಂದಿಗೆ ಟೆಸ್ಟ್ ಪಂದ್ಯವನ್ನು ಆಡಿದೆ, ಆದರೆ 596 ಪಂದ್ಯಗಳ ನಂತರ, ಆರು ಎಡಗೈ ಬ್ಯಾಟ್ಸ್‌ಮನ್‌ಗಳು ಭಾರತದ ಆಡುವ XI ನ ಭಾಗವಾಗಿದ್ದಾರೆ.

ಫ್ರೀಡಂ ಟ್ರೋಫಿಯ ಮೊದಲ ಟೆಸ್ಟ್‌ಗಾಗಿ ಭಾರತ ತನ್ನ ಆಡುವ ಬಗಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಂಡಿತು. ತಮಿಳುನಾಡಿನ ಬಿ ಸಾಯಿ ಸುದರ್ಶನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಕೈಬಿಟ್ಟು ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಯಿತು. ಅಕ್ಷರ್‌ ಫೆಬ್ರವರಿ 2024 ರ ನಂತರ ಮೊದಲ ಬಾರಿಗೆ ಭಾರತದ ಆಡುವ ಬಳಗದಲ್ಲಿ ಕಾಣಿಸಿಕೊಂಡರು. ಇಂಗ್ಲೆಂಡ್‌ ಸರಣಿ ವೇಳೆ ಗಾಯಗೊಂಡಿದ್ದ ಪಂತ್‌ ಮತ್ತೆ ತಂಡಕ್ಕೆ ಮರಳಿದರು.

ಇದನ್ನೂ ಓದಿ IND vs SA: ಭಾರತ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಪಕ್ಕೆಲುಬಿನ ಗಾಯದಿಂದಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಕಗಿಸೊ ರಬಾಡ ಈ ಪಂದ್ಯದಿಂದ ಹೊರಗುಳಿದರು. ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ನಾಯಕ ಟೆಂಬಾ ಬವುಮಾ ಮತ್ತೆ ತಂಡಕ್ಕೆ ಮರಳಿದರು. ಸ್ಪಿನ್ನರ್‌ ಸೆನುರನ್ ಮುತ್ತುಸಾಮಿಗೆ ಸ್ಥಾನ ನೀಡದ್ದು ಅಚ್ಚರಿಗೆ ಕಾರಣವಾಯಿತು.

ಉಭಯ ತಂಡಗಳ ಪ್ಲೇಯಿಂಗ್‌ ಇಲೆವೆನ್‌

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿ.ಕೀ.), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬಾವುಮಾ(ನಾಯಕ), ಟೋನಿ ಡಿ ಝೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರಿನ್ನೆ(ವಿ.ಕೀ.), ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್.