ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ T20ಗೆ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ವಾಷಿಂಗ್ಟನ್ ಸುಂದರ್ ಹೊರಬೀಳುವ ಸಾಧ್ಯತೆಯಿದೆ. ಆರಂಭಿಕರಾಗಿ ಅಭಿಷೇಕ್ ಶರ್ಮಾ ಜತೆ ಗಿಲ್ ಕಣಕ್ಕಿಳಿಯಲಿದ್ದಾರೆ. ವಿಕೆಟ್ ಕೀಪಿಂಗ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್, ಬೌಲಿಂಗ್ ವಿಭಾಗದಲ್ಲಿ ಭಾರತ ತಂಡವು ಸ್ಪಿನ್ನರ್‌ಗಳಾದ ಕುಲ್‌ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಆಡಿಸಬಹುದು.
Shubman Gill -
ಮುಂಬಯಿ, ಡಿ.8: ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ (IND vs SA T20I) ಮೂರು ಪಂದ್ಯಗಳ ಏಕದಿನ ಸರಣಿ ಮುಕ್ತಾಯಗೊಂಡಿದೆ. ಸರಣಿಯಲ್ಲಿ ಭಾರತ ತಂಡ 2-1 ಅಂತರದಿಂದ ಗೆದ್ದು ಬೀಗಿತ್ತು. ಇದೀಗ ಉಭಯ ತಂಡಗಳು ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗುತ್ತಿದ್ದು, ಸರಣಿಯ ಮೊದಲ ಪಂದ್ಯ ಮಂಗಳವಾರ ಕಟಕ್‌ನ ಬಾರಬತಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಶುಭ್‌ಮನ್ ಗಿಲ್( Shubman Gill), ಹಾರ್ದಿಕ್ ಪಾಂಡ್ಯ(Hardik Pandya) ಮೆರಳಿದ್ದು ತಂಡಕ್ಕೆ ಹೆಚ್ಚು ಬಲ ನೀಡಿದಂತಾಗಿದೆ.
ನಾಯಕ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆಯಿದೆ. ತಿಲಕ್ ವರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಆಡಬಹುದು. ಇನ್ನು ಏಷ್ಯಾ ಕಪ್‌ನಲ್ಲಿ ಗಾಯದ ಸಮಸ್ಯೆಗೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ ದೀರ್ಘಾವಧಿಯ ಬಳಿಕ ತಂಡಕ್ಕೆ ಮರಳಿದ್ದಾರೆ. ಇದರಿಂದಾಗಿ ಭಾರತ ತಂಡ ಮೂರು ಆಲ್‌ರೌಂಡರ್‌ಗಳ ಜೊತೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹಾರ್ದಿಕ್ ನಂತರ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಅವರು ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ ಯಾವಾಗ?; ಇಲ್ಲಿದೆ ಮಾಹಿತಿ
ವಾಷಿಂಗ್ಟನ್ ಸುಂದರ್ ಹೊರಬೀಳುವ ಸಾಧ್ಯತೆಯಿದೆ. ಆರಂಭಿಕರಾಗಿ ಅಭಿಷೇಕ್ ಶರ್ಮಾ ಜತೆ ಗಿಲ್ ಕಣಕ್ಕಿಳಿಯಲಿದ್ದಾರೆ. ವಿಕೆಟ್ ಕೀಪಿಂಗ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್, ಬೌಲಿಂಗ್ ವಿಭಾಗದಲ್ಲಿ ಭಾರತ ತಂಡವು ಸ್ಪಿನ್ನರ್‌ಗಳಾದ ಕುಲ್‌ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಆಡಿಸಬಹುದು. ಜಸ್‌ಪ್ರೀತ್ ಬುಮ್ರಾ ವೇಗದ ಬೌಲಿಂಗ್ ವಿಭಾಗ ಮುನ್ನಡೆಸಲಿದ್ದಾರೆ.
Shubman Gill and Abhishek Sharma Bonding 🤝 pic.twitter.com/WxOZ6PKNdy
— GURMEET GILL (@GURmeetG9) December 7, 2025
ಮೊದಲ ಟಿ20 ಪಂದ್ಯಕ್ಕೆ ಭಾರತದ ಸಾಂಭವ್ಯ ತಂಡ
ಶುಭಮನ್ ಗಿಲ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿ. ಕೀ), ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಸರಣಿಯ ವೇಳಾಪಟ್ಟಿ
ಮೊದಲ ಟಿ20: ಡಿಸೆಂಬರ್ 9, ಕಟಕ್
ದ್ವಿತೀಯ ಟಿ20: ಡಿಸೆಂಬರ್ 11, ನ್ಯೂ ಚಂಡೀಗಢ
ತೃತೀಯ ಟಿ20: ಡಿಸೆಂಬರ್ 14, ಧರ್ಮಶಾಲಾ
ನಾಲ್ಕನೇ ಟಿ20: ಡಿಸೆಂಬರ್ 17, ಲಕ್ನೋ
ಐದನೇ ಟಿ20: ಡಿಸೆಂಬರ್ 19, ಅಹಮದಾಬಾದ್