ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND-W vs AUS-W: ನಿಧಾನಗತಿಯ ಬೌಲಿಂಗ್‌; ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಶೇಕಡಾ 10 ರಷ್ಟು ದಂಡ

"ಐಸಿಸಿ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಯ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಅವರ ಪಂದ್ಯ ಶುಲ್ಕದ ಶೇಕಡಾ ಐದು ರಷ್ಟು ದಂಡ ವಿಧಿಸಲಾಗುತ್ತದೆ" ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಶೇಕಡಾ 10 ರಷ್ಟು ದಂಡ

-

Abhilash BC Abhilash BC Sep 19, 2025 4:25 PM

ಮುಲ್ಲನಪುರ: ಬುಧವಾರ ನಡೆದಿದ್ದ ಭಾರತ(IND-W vs AUS-W) ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಓವರ್‌ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ(Australia Women) ಐಸಿಸಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ.

ಆಸ್ಟ್ರೇಲಿಯಾ ನಿಗದಿಪಡಿಸಿದ ಸಮಯದಲ್ಲಿ ಎರಡು ಓವರ್‌ ಕಡಿಮೆ ಬೌಲಿಂಗ್ ಮಾಡಿದ ಕಾರಣಕ್ಕೆ ಐಸಿಸಿ ಅಂತರರಾಷ್ಟ್ರೀಯ ಅಂಪೈರ್‌ಗಳ ಸಮಿತಿಯ ಜಿ.ಎಸ್.ಲಕ್ಷ್ಮಿ ದಂಡ ವಿಧಿಸಿದರು. ಆನ್-ಫೀಲ್ಡ್ ಅಂಪೈರ್‌ಗಳಾದ ವೃಂದಾ ರಥಿ ಮತ್ತು ಜನನಿ ನಾರಾಯಣನ್, ಮೂರನೇ ಅಂಪೈರ್ ಲಾರೆನ್ ಅಗೆನ್‌ಬಾಗ್ ಮತ್ತು ನಾಲ್ಕನೇ ಅಂಪೈರ್ ಗಾಯತ್ರಿ ವೇಣುಗೋಪಾಲನ್ ಅವರು ಆರೋಪವನ್ನು ಹೊರಿಸಿದ ಬಳಿಕ ದಂಡ ವಿಧಿಸಲಾಗಿದೆ.

"ಐಸಿಸಿ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಯ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಅವರ ಪಂದ್ಯ ಶುಲ್ಕದ ಶೇಕಡಾ ಐದು ರಷ್ಟು ದಂಡ ವಿಧಿಸಲಾಗುತ್ತದೆ" ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಅಲಿಸ್ಸಾ ಹೀಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಮತ್ತು ಪ್ರಸ್ತಾವಿತ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ, ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ.

ಇದನ್ನೂ ಓದಿ Smriti Mandhana: 12ನೇ ಏಕದಿನ ಶತಕ ಸಿಡಿಸಿ ವಿಶ್ವ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

ಪಂದ್ಯದಲ್ಲಿ ಭಾರತ ಮಹಿಳಾ ತಂಡ 102 ರನ್‌ಗಳ ಬೃಹತ್ ಅಂತರದ ಗೆಲುವು ಸಾಧಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಮಾಡಿತ್ತು. ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ ಶನಿವಾರ(ಸೆ.20) ರಂದು ನಡೆಯಲಿದೆ. ಯಾರೇ ಗೆದ್ದರು ಸರಣಿ ವಶಪಡಿಸಿಕೊಳ್ಳಲಿದ್ದಾರೆ.