ಪಾಕ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ತಂಡ
India Women vs Pakistan Women: ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರದ ಬಳಿಕ ಉಭಯ ದೇಶಗಳ ಮಧ್ಯೆ ಈಗಲೂ ಉದ್ವಿಗ್ನ ಪರಿಸ್ಥಿತಿ ಇದೆ. ಹೀಗಾಗಿ ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ಹರ್ಮನ್‌ಪ್ರೀತ್ ಪಡೆಯ ಮೇಲಿನ ನಿರೀಕ್ಷೆ ದೊಡ್ಡ ಮಟ್ಟದಲ್ಲೇ ಇದೆ.
IND-W vs PAK-W, Women's -
ಬರ್ಮಿಂಗ್‌ಹ್ಯಾಮ್, ಜೂ.14: ಬದ್ಧ ವೈರಿ ಪಾಕಿಸ್ಥಾನ ವಿರುದ್ಧದ ಹೈವೋಲ್ಟೇಜ್ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ನಡೆಸುವ ನಿರ್ಧಾರ ಕೈಗೊಂಡರು. ಇತ್ತಂಡಗಳಿಗೂ ಇದು ಟೂರ್ನಿಯಲ್ಲಿ ಮೊದಲ ಪಂದ್ಯವಾಗಿದೆ.
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರದ ಬಳಿಕ ಉಭಯ ದೇಶಗಳ ಮಧ್ಯೆ ಈಗಲೂ ಉದ್ವಿಗ್ನ ಪರಿಸ್ಥಿತಿ ಇದೆ. ಹೀಗಾಗಿ ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ಹರ್ಮನ್‌ಪ್ರೀತ್ ಪಡೆಯ ಮೇಲಿನ ನಿರೀಕ್ಷೆ ದೊಡ್ಡ ಮಟ್ಟದಲ್ಲೇ ಇದೆ.
ಉಭಯ ತಂಡಗಳು ಟಿ20 ವಿಶ್ವಕಪ್‌ನಲ್ಲಿ 8 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 2 ಪಂದ್ಯಗಳನ್ನು ಗೆದ್ದಿದೆ. ಮಹಿಳಾ ಟಿ20 ವಿಶ್ವಕಪ್, ಏಷ್ಯಾಕಪ್, ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟ ಸೇರಿದಂತೆ ಮತ್ತು ಜಾಗತಿಕ ಕ್ರೀಡಾಕೂಟಗಳಲ್ಲಿ ಭಾರತವು ಈ ಸ್ವರೂಪದಲ್ಲಿ ಪಾಕಿಸ್ತಾನವನ್ನು ಎದುರಿಸಿದೆ. ಆದರೆ ಈ ಸ್ವರೂಪದಲ್ಲಿ ಭಾರತ ಎಂದಿಗೂ ಪಾಕಿಸ್ತಾನವನ್ನು ದ್ವಿಪಕ್ಷೀಯ ಪಂದ್ಯಗಳಲ್ಲಿ ಎದುರಿಸಿಲ್ಲ.
TOSS UPDATE: India Women won the toss and elected to bat against Pakistan Women
— Home of T20 (@HomeofT20) June 14, 2026
No handshake between the two captains ❌🤝#PAKvsIND #T20WorldCup #FatimaSana pic.twitter.com/q0067R1A5E
ಉಭಯ ಆಡುವ ಬಳಗ
ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿ.ಕೀ.), ದೀಪ್ತಿ ಶರ್ಮಾ, ಅರುಂಧತಿ ರೆಡ್ಡಿ, ಶ್ರೇಯಾಂಕ ಪಾಟೀಲ್, ಶ್ರೀ ಚರಣಿ, ಕ್ರಾಂತಿ ಗೌಡ್.
ಪಾಕಿಸ್ತಾನ: ಗುಲ್ ಫಿರೋಜಾ, ಮುನೀಬಾ ಅಲಿ(ವಿ.ಕೀ.), ಆಯೇಶಾ ಜಾಫರ್, ಸೈರಾ ಜಬೀನ್, ಅಲಿಯಾ ರಿಯಾಜ್, ನತಾಲಿಯಾ ಪರ್ವೈಜ್, ಫಾತಿಮಾ ಸನಾ(ನಾಯಕ), ರಮೀನ್ ಶಮೀಮ್, ನಶ್ರಾ ಸಂಧು, ತಸ್ಮಿಯಾ ರುಬಾಬ್, ಸಾದಿಯಾ ಇಕ್ಬಾಲ್.