ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಟಿ20 ವಿಶ್ವಕಪ್‌ಗೆ ಭಾರತ ಸಿದ್ಧ: ಇಲ್ಲಿದೆ ವೇಳಾಪಟ್ಟಿ, ಪೂರ್ಣ ತಂಡ

India At T20 World Cup 2026: ಹಾಲಿ ಚಾಂಪಿಯನ್‌ ಭಾರತ ತಂಡ ಪಾಕಿಸ್ತಾನ, ಅಮೆರಿಕ, ನೆದರ್‌ಲ್ಯಾಂಡ್ಸ್ ಮತ್ತು ನಮೀಬಿಯಾ ಜತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಫೆ.15 ರಂದು ಕೊಲಂಬೊದಲ್ಲಿ ನಿಗದಿಯಾಗಿರುವ ಭಾರತದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದ ಕಾರಣ ಇತ್ತಂಡಗಳ ಕಾದಾಟ ಕ್ರಿಕೆಟ್‌ ಅಭಿಮಾನಿಗಳಿಗೆ ಈ ಬಾರಿ ಕೈತಪ್ಪುವ ಸಾಧ್ಯತೆ ಇದೆ.

Team India

ನವದೆಹಲಿ, ಫೆ.6: ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 4-1 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಟೀಮ್ ಇಂಡಿಯಾ ಈಗ ಶನಿವಾರ(ಫೆ.7)ದಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ 2026(T20 World Cup 2026)ಕ್ಕೆ ಸಜ್ಜಾಗಿದೆ. ಶ್ರೀಲಂಕಾ ಜತೆ ಸಹ-ಆತಿಥ್ಯ ವಹಿಸಿಕೊಂಡಿರುವ ಭಾರತ(India At T20 World Cup 2026), ಒಂದು ತಿಂಗಳ ಕಾಲ ನಡೆಯುವ ಟೂರ್ನಿಯನ್ನು ಅತ್ಯಂತ ಆತ್ಮವಿಶ್ವಾಸದಿಂದ ಪ್ರವೇಶಿಸುತ್ತಿದೆ. ಬುಧವಾರ ನವಿ ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್‌ಗೆ ಮುನ್ನ ನಡೆದ ಏಕೈಕ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 30 ರನ್‌ಗಳ ಜಯ ಸಾಧಿಸಿತ್ತು.

ಭಾರತ ತಂಡವು ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು. 2007 ರಲ್ಲಿ ಎಂಎಸ್ ಧೋನಿ ನೇತೃತ್ವದ ತಂಡವು ಉದ್ಘಾಟನಾ ಆವೃತ್ತಿಯಲ್ಲಿ ಜಯಗಳಿಸಿದ ನಂತರ ಇದು ಭಾರತದ ಎರಡನೇ ಪ್ರಶಸ್ತಿ ಗೆಲುವು. ಈ ಬಾರಿ, ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿದ್ದು, ಮುಂಬೈನಲ್ಲಿ ಯುಎಸ್ಎ ವಿರುದ್ಧ ಶನಿವಾರ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಹಾಲಿ ಚಾಂಪಿಯನ್‌ ಭಾರತ ತಂಡ ಪಾಕಿಸ್ತಾನ, ಅಮೆರಿಕ, ನೆದರ್‌ಲ್ಯಾಂಡ್ಸ್ ಮತ್ತು ನಮೀಬಿಯಾ ಜತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಫೆ.15 ರಂದು ಕೊಲಂಬೊದಲ್ಲಿ ನಿಗದಿಯಾಗಿರುವ ಭಾರತದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದ ಕಾರಣ ಇತ್ತಂಡಗಳ ಕಾದಾಟ ಕ್ರಿಕೆಟ್‌ ಅಭಿಮಾನಿಗಳಿಗೆ ಈ ಬಾರಿ ಕೈತಪ್ಪುವ ಸಾಧ್ಯತೆ ಇದೆ.



ನಾಳೆಯಿಂದ ಟಿ20 ವಿಶ್ವಕಪ್‌ ಸಮರ; ಟೂರ್ನಿಯ ಮಳೆ ನಿಯಮ ಹೇಗಿದೆ?

ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಪ್ರಾರಂಭವಾಗಲಿವೆ. ಸೂಪರ್ 8 ಪಂದ್ಯಗಳು ಫೆಬ್ರವರಿ 21 ರಿಂದ ಪ್ರಾರಂಭವಾಗಲಿವೆ. ನಂತರ ಮಾರ್ಚ್ 4 ಮತ್ತು 5 ರಂದು ಸೆಮಿಫೈನಲ್ಸ್ ಮತ್ತು ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದೆ.

ಭಾರತದ ಟಿ20 ವಿಶ್ವಕಪ್ ವೇಳಾಪಟ್ಟಿ

ಫೆಬ್ರವರಿ 7: ಭಾರತ vs ಅಮೆರಿಕ (ವಾಂಖೆಡೆ ಕ್ರೀಡಾಂಗಣ, ಮುಂಬೈ)

ಫೆಬ್ರವರಿ 12: ಭಾರತ vs ನಮೀಬಿಯಾ (ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ)

ಫೆಬ್ರವರಿ 15: ಭಾರತ vs ಪಾಕಿಸ್ತಾನ (ಆರ್. ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ)

ಫೆಬ್ರವರಿ 18: ಭಾರತ vs ನೆದರ್ಲ್ಯಾಂಡ್ಸ್ (ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್)

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.