ಟೋಕಿಯೊ: ಭಾರತೀಯ ಹಾಕಿ ತಂಡ ಮೂರನೇ ಪಂದ್ಯ ದಲ್ಲಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ 3-0 ಅಂತರದಿಂದ ಜಯ ಸಾಧಿಸಿದ್ದಾರೆ. ಒಲಿಂಪಿಕ್ಸ್ ನ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರೀ ಅಂತರದಿಂದ ಸೋಲನುಭವಿಸಿತ್ತು.
ಸ್ಪೇನ್ ತಂಡ ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಡಿತು. ಆದರೆ ಪ್ರತಿ ಆಕ್ರಮಣ ತಂತ್ರಕ್ಕೆ ಮೊರೆ ಹೋದ ಭಾರತ ಯಶಸ್ಸು ಪಡೆಯಿತು. ಸಿಮ್ರನ್ ಜೀತ್ ಸಿಂಗ್ 14ನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸಿದರು. ಪೆನಾಲ್ಟಿ ಅವಕಾಶವನ್ನು ಉಪಯೋಗಿಸಿಕೊಂಡ ರೂಪಿಂದರ್ ಪಾಲ್ ಸಿಂಗ್ ಎರಡನೇ ಗೋಲು ಬಾರಿಸಿದರು.
ಎರಡನೇ ಅವಧಿಯಲ್ಲಿ ಸ್ಪೇನ್ ಮತ್ತಷ್ಟು ಆಕ್ರಮಣಕಾರಿ ಆಡಿದರೂ, ಭಾರತೀಯರು ಗೋಲು ಬಾರಿಸಲು ಅವಕಾಶ ನೀಡಲಿಲ್ಲ. ಕೊನೆಯ ಘಳಿಗೆಯಲ್ಲಿ ರೂಪಿಂದರ್ ಪಾಲ್ ಮತ್ತೊಂದು ಗೋಲು ಬಾರಿಸಿ ಭಾರತಕ್ಕೆ ಮುನ್ನಡೆ ಹೆಚ್ಚಿಸಿದರು. ಇದರಿಂದ ಭಾರತ ಗೆಲುವು ಸಾಧಿಸಿತು.
ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿ ಮುಂದಿನ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸಿತ್ತು.